ಹುಬ್ಬಳ್ಳಿ: ಕೊರೊನಾ ಸೋಂಕು ದೃಢಪಟ್ಟಿದ್ದ ಕಳ್ಳತನದ ಆರೋಪಿಯೋರ್ವ ಕಿಮ್ಸ್ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ.
ಕಳ್ಳತನ ಆರೋಪದಲ್ಲಿ ಉಪನಗರ ಠಾಣೆಯ ಪೊಲೀಸರು ಆತನನ್ನು ಬಂಧಿಸಿದ್ದರು. ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಿ14,537 ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಇಂದು ಬೆಳಗ್ಗೆ 5.30 ಕ್ಕೆ ಕಿಮ್ಸ್ ಕೋವಿಡ್ ವಾರ್ಡ್ನಿಂದ ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಇಬ್ಬರ ಪೊಲೀಸ್ ಸಿಬ್ಬಂದಿ ಕಾವಲಿಗಿದ್ದರೂ ಅವರ ಕಣ್ಣು ತಪ್ಪಿಸಿ ಈ ಚಾಲಾಕಿ ಪರಾರಿಯಾಗಿದ್ದು, ನಗರದ ಜನರಲ್ಲಿ ಮತ್ತಷ್ಟು ಆತಂಕ ಶುರುವಾಗಿದೆ.
ಈತನ ಸಂಪರ್ಕದಿಂದ ಉಪನಗರ ಠಾಣೆಯ ಕಾನ್ಸ್ಟೇಬಲ್ಗೆ ಕೊರೊನಾ ದೃಢಪಟ್ಟಿದೆ. ಆರೋಪಿ ಮತ್ತೆ ಪರಾರಿಯಾಗಿದ್ದಾನೆ. ಈ ಸಂಬಂಧ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳನ ಶೋಧ ಕಾರ್ಯದಲ್ಲಿ ಪೊಲೀಸರು ನಿರತರಾಗಿದ್ದಾರೆ.