ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ 9ನೇ ತರಗತಿ ವಿದ್ಯಾರ್ಥಿಗೆ ಕೊರೊನಾ ದೃಢಪಟ್ಟಿದ್ದು, ಪರಿಣಾಮ ಶಾಲೆಗೆ ರಜೆ ಘೋಷಿಸಲಾಗಿದೆ. ಇನ್ನು ನಗರದ ಖಾಸಗಿ ಶಾಲೆಯ 9ನೇ ತರಗತಿಯಲ್ಲಿ ಓದುತ್ತಿರುವ ಈ ವಿದ್ಯಾರ್ಥಿಯ ಸಹೋದರಿ ಧಾರವಾಡದ ಎಸ್ಡಿಎಂ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾಳೆ.
ಎಂಬಿಬಿಎಸ್ ವಿದ್ಯಾರ್ಥಿನಿಗೆ ಪಾಸಿಟಿವ್ ಬಂದಿದ್ದರಿಂದ ಅವರ ಮನೆಯಲ್ಲಿರುವ ಕುಟುಂಬಸ್ಥರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ. ಆ ವೇಳೆ ಬಾಲಕನಿಗೂ ಕೊರೊನಾ ಪಾಸಿಟಿವ್ ದೃಢ ಪಟ್ಟಿದ್ದು, ನಗರದ ಆದರ್ಶನಗರದಲ್ಲಿರುವ G.V.JOSHI ರೋಟರಿ ಶಾಲೆಯ ಬಾಲಕನನ್ನು ಈಗಾಗಲೇ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಇದನ್ನೂ ಓದಿ: Watch.. ರಾಜಕೀಯಕ್ಕೆ ನಮ್ಮ ವೈಯಕ್ತಿಕ ವಿಚಾರ ಎಳೆದು ತರಬೇಡಿ... ಕಣ್ಣೀರಿಟ್ಟ ಕೆಜಿಎಫ್ ಬಾಬು ಕುಟುಂಬ
ನಿನ್ನೆ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಇವತ್ತು ಮುಂಜಾನೆ ವರದಿ ಬಂದಿದೆ. ಇನ್ನು ಶಾಲೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ಇಂದು ಮಧ್ಯಾಹ್ನದಿಂದಲೇ ಶಾಲೆಯಿಂದ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ.
ಈ ಕುರಿತಂತೆ ಮಾತನಾಡಿದ ಪ್ರಾಂಶುಪಾಲ ನರೇಶ ಪಾಟೀಲ್, ಮುಂಜಾಗ್ರತಾ ಕ್ರಮವಾಗಿ ನಾಳೆ ಕೂಡ ಶಾಲೆಯಲ್ಲಿರುವ ಮಕ್ಕಳಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತದೆ. ಜೊತೆಗೆ ಸೋಮವಾರದವರೆಗೆ ರೋಟರಿ ಶಾಲೆಗೆ ರಜೆ ನೀಡಲಾಗಿದೆ ಎಂದಿದ್ದಾರೆ.