ಧಾರವಾಡ : ರಾಜ್ಯಾದ್ಯಂತ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಸಾಗಿರುವ ಮಹಾಮಾರಿ ಕೊರೊನಾ ಅಟ್ಟಹಾಸ ಇದೀಗ ಗರಗ ಪೊಲೀಸ್ ಠಾಣೆಗೂ ಕಾಲಿಟ್ಟಿದೆ.
ಗರಗ ಪೊಲೀಸ್ ಠಾಣೆ ಪಿಎಸ್ಐಗೆ ಕೊರೊನಾ ದೃಢಪಟ್ಟಿದ್ದು, ಇದೀಗ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದ ಕೆಲ ಪೊಲೀಸ್ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಠಾಣೆಯ 15ಕ್ಕೂ ಹೆಚ್ಚು ಸಿಬ್ಬಂದಿಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸೂಚಿಸಲಾಗಿದೆ.