ಧಾರವಾಡ: ಜ. 8ರಂದು (ನಾಳೆ) ಜಿಲ್ಲೆಯ ಆಯ್ದ ಎಂಟು ಆಸ್ಪತ್ರೆಗಳಲ್ಲಿ ಲಸಿಕೆ ಸಾಗಣೆಯಿಂದ ಹಿಡಿದು, ಅದನ್ನು ವ್ಯಕ್ತಿಗೆ ಹಾಕುವವರೆಗೆ ಪ್ರತಿಯೊಂದು ಹಂತಗಳ ಪ್ರಯೋಗಾರ್ಥಕ ಅಣುಕು ಲಸಿಕೆ ( Dry Run) ಪರೀಕ್ಷೆ ಕೈಗೊಳ್ಳಲು ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಿದ್ಧವಾಗಿವೆ.
ಈ ಸುದ್ದಿಯನ್ನೂ ಓದಿ: ಸದ್ದು ಮಾಡಿದ ಖಾಕಿ ಪಿಸ್ತೂಲ್: ಬೆಂಗಳೂರಲ್ಲಿ ರೌಡಿಶೀಟರ್ ಕಾಲಿಗೆ ಗುಂಡು
ಧಾರವಾಡದ ಜಿಲ್ಲಾ ಆಸ್ಪತ್ರೆ, ಪುರೋಹಿತ ನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಹುಬ್ಬಳ್ಳಿಯ ಕಿಮ್ಸ್, ಸಂಜೀವಿನಿ ಆಯುರ್ವೇದ ವೈದ್ಯಕೀಯ ಕಾಲೇಜು, ಸುಚಿರಾಯು ಆಸ್ಪತ್ರೆ, ಗರಗ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ, ನವಲಗುಂದ ತಾಲೂಕು ಆಸ್ಪತ್ರೆ ಹಾಗೂ ಸತ್ತೂರಿನ ಎಸ್ಡಿಎಂ ಆಸ್ಪತ್ರೆಗಳಲ್ಲಿ ಈ ಪ್ರಯೋಗಾರ್ಥ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.