ಧಾರವಾಡ: ಹುಬ್ಬಳ್ಳಿಯಲ್ಲಿ ಒಂದೇ ಕುಟುಂಬದಲ್ಲಿ ಐದು ಕೊರೊನಾ ಸೋಂಕು ದೃಢಪಟ್ಟಿರುವುದು ಹಾಗೂ ಜನಸಾಂದ್ರತೆ ಪ್ರಮಾಣ ಆಧರಿಸಿ ಧಾರವಾಡ ಜಿಲ್ಲೆಯನ್ನು ಹಾಟ್ ಸ್ಪಾಟ್ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.
ಜಿಲ್ಲೆಯ ಜನತೆ ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಮನೆಯಲ್ಲಿಯೇ ಇರುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಸಹಕರಿಸಲು ಜಿಲ್ಲಾಧಿಕಾರಿ ದೀಪಾ ಚೋಳನ್ ಮನವಿ ಮಾಡಿದ್ದಾರೆ.
ಇನ್ನು ಜಿಲ್ಲೆಯಾದ್ಯಂತ ಬುಧವಾರದವರೆಗೆ 1129 ಮಂದಿಯ ಮೇಲೆ ನಿಗಾವಹಿಸಿಲಾಗಿದೆ. 417 ಮಂದಿ 14 ದಿನಗಳ ಹೋಮ್ ಕ್ವಾರಂಟೈನ್ನಲ್ಲಿಡಲಾಗಿದೆ.156 ಮಂದಿ 14 ದಿನಗಳ ಕ್ವಾರಂಟೈನ್ ಮುಗಿಸಿದ್ದಾರೆ.539 ಮಂದಿ 28 ದಿನಗಳ ಐಸೊಲೇಷನ್ ಮುಗಿಸಿದ್ದಾರೆ ಎಂದು ಚೋಳನ್ ತಿಳಿಸಿದ್ದಾರೆ.