ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸಮುದಾಯಕ್ಕೆ ಹರಡಿತಾ ಎಂಬ ಪ್ರಶ್ನೆ ಉದ್ಭವವಾಗಿದೆ. ಇಂದು 26 ಸೋಂಕಿತರಲ್ಲಿ ದೃಢಪಟ್ಟ 18 ಪ್ರಕರಣಗಳ ಸೋಂಕಿನ ಮೂಲ ಪತ್ತೆಯಾಗಿಲ್ಲ. ಇದು ಧಾರವಾಡ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
ಇಂದು ಆರು ಮಕ್ಕಳು ಸೇರಿದಂತೆ 26 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 244 ಕ್ಕೆ ಏರಿಕೆಯಾಗಿದೆ.
26 ಜನ ಸೋಂಕಿತರಲ್ಲಿ 18 ಜನರಿಗೆ ಯಾವುದೇ ಸೋಂಕಿತರ ಸಂಪರ್ಕವಿಲ್ಲವಾಗಿದೆ. ತೆಲಂಗಾಣ ಮತ್ತು ಮಹಾರಾಷ್ಟ್ರದಿಂದ ಬಂದಿರುವ ತಲಾ ಇಬ್ಬರಿಗೆ ಸೋಂಕು, ದೆಹಲಿಯಿಂದ ಬಂದಿರುವ ಒಬ್ಬರಿಗೆ ಹಾಗೂ ಜ್ವರ, ನೆಗಡಿ, ಕೆಮ್ಮು ಲಕ್ಷಣ ಕಂಡು ಬಂದ ಹಿನ್ನೆಲೆ, ಇಬ್ಬರನ್ನು ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿದಾಗ ಕೊರೊನಾ ದೃಢಪಟ್ಟಿದೆ.
ತೀವ್ರ ಉಸಿರಾಟದ ತೊಂದರೆಯುಳ್ಳ ಒಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಉಳಿದವರಿಗೆ ಹುಬ್ಬಳ್ಳಿ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.