ಹುಬ್ಬಳ್ಳಿ: ಜಿಲ್ಲೆಯಲ್ಲಿ ಕಳೆದ ಎರಡು ವರ್ಷದಿಂದ ಭಾರೀ ನಷ್ಟ ಅನುಭವಿಸುತ್ತಿರುವ ರೈತನಿಗೆ ಈ ಬಾರಿ ಅಧಿಕ ಮಳೆಯಿಂದಾಗಿ ಕಷ್ಟಪಟ್ಟು ಬೆಳೆದಿದ್ದ ಹತ್ತಿ ಬೆಳೆ ನಾಶವಾಗಿರುವುದು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.
ನಿರಂತರ ಸುರಿಯುತ್ತಿರುವ ಮಳೆಯ ಪರಿಣಾಮ ಹುಬ್ಬಳ್ಳಿ ಸಮೀಪದ ಬಿಡ್ನಾಳ, ಅದರಗುಂಚಿ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳೆದ ಬೆಳೆಗಳು ಈಗ ಜಲಾವೃತಗೊಂಡಿವೆ. ಆದರೆ ನಮ್ಮ ಸಮಸ್ಯೆಗಳನ್ನು ಕೇಳಲು ಯಾರೊಬ್ಬರೂ ಬರುತ್ತಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾರುಕಟ್ಟೆಯಲ್ಲಿ ಹತ್ತಿಗೆ ಉತ್ತಮ ಬೆಲೆ ಇದೆ. ಆದ್ರೆ ಸಾಲ ಮಾಡಿ ಬೆಳೆದಿದ್ದ ಬೆಳೆಗಳು ನೀರಿನಲ್ಲಿ ಮುಳುಗಿವೆ. ಆದ್ದರಿಂದ ಆದಷ್ಟು ಬೇಗ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಲಿ ಎಂದು ಮನವಿ ಮಾಡಿದ್ದಾರೆ.