ಧಾರವಾಡ: ವಿದ್ಯಾಕಾಶಿ ಧಾರವಾಡದ ಪ್ರತಿಷ್ಠಿತ ಕಾಲೇಜಿನ ಪ್ರಾಚಾರ್ಯರಿಗೆ ಬಂಧನ ವಾರಂಟ್ ನೀಡಲಾಗಿದೆ. ಇಲ್ಲಿನ ಕರ್ನಾಟಕ ಕಾಲೇಜಿನ ಪ್ರಾಚಾರ್ಯರಾದ ದುರಗಪ್ಪ ಕರಡೋಣಿಗೆ ಅವರಿಗೆ ವಾರಂಟ್ ಜಾರಿಯಾಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್‌ನ ಜೆಎಂಎಫ್ಸಿ ನ್ಯಾಯಾಲಯದಿಂದ ಬಂಧನ ವಾರಂಟ್ ನೀಡಲಾಗಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ, ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಲಾಗಿದೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ಗೆ ಹಾಜರಾಗದ ಹಿನ್ನೆಲೆಯಲ್ಲಿ ವಾರಂಟ್ ಹೊರಡಿಸಲಾಗಿದೆ. ಗೋಕಾಕ್‌ನ ವಿಠ್ಠಲ್ ಎನ್ನುವವರ ಬಳಿ ಕರಡೋಣಿ 3 ಲಕ್ಷ ರೂ. ಹಣ ಪಡೆದಿದ್ದರು. ಹಣ ಹಿಂತಿರುಗಿಸಲು ಚೆಕ್ ನೀಡಿದ್ದರು. ಆದರೆ ಖಾತೆಯಲ್ಲಿ ಹಣವಿಲ್ಲದೇ ಚೆಕ್ ಬೌನ್ಸ್ ಆಗಿರುವುದು ಕಂಡುಬಂದಿತ್ತು. ಪ್ರಾಚಾರ್ಯರ ವಿರುದ್ಧ ಕೋರ್ಟ್ ಗರಂ ಆಗಿದ್ದು, ಬಂಧಿಸಿ ಹಾಜರುಪಡಿಸಲು ಆದೇಶಿಸಲಾಗಿದೆ.
ಇದನ್ನೂ ಓದಿ: ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ.. ಕಾರಣ?