ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಸಾಕ್ಷ್ಯನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ವಿಚಾರಣೆ ನಡೆಯಿತು.
ಧಾರವಾಡದ ಪ್ರಧಾನ ದಿವಾಣಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸುವ ವಿಷಯದ ತೀರ್ಪನ್ನು ನಾಳೆಗೆ ಕಾಯ್ದಿರಿಸಲಾಗಿದೆ.
ಸಿಬಿಐ ಕೇಸ್ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗವಣೆಯಾದ ಹಿನ್ನೆಲೆ, ಈ ಕೇಸ್ ಸಹ ಅದೇ ಕೋರ್ಟ್‌ಗೆ ವರ್ಗಾಯಿಸುವಂತೆ ವಿನಯ್ ಕುಲಕರ್ಣಿ ಪರ ವಕೀಲರು ನ್ಯಾಯಾಲಯಕ್ಕೆ ಕೋರಿದ್ದರು. ಈ ಕೋರಿಕೆಗೆ ಮೇಲ್ ಮೂಲಕ ಸಿಬಿಐ ಆಕ್ಷೇಪಣೆ ಸಲ್ಲಿಸಿದೆ.
ಓದಿ: ಯೋಗೇಶ್ ಗೌಡ ಹತ್ಯೆ ಪ್ರಕರಣ: ಸಾಕ್ಷ್ಯ ನಾಶ ಕೇಸ್ ವಿಚಾರಣೆ ನಾಳೆಗೆ ಮುಂದೂಡಿಕೆ
ಆಕ್ಷೇಪಣೆ ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ಸಿಬಿಐ ವಕೀಲರಿಂದ ಪ್ರತಿವಾದ ನಡೆಯಿತು. ವಾದ - ಪ್ರತಿವಾದ ಆಲಿಸಿದ ಕೋರ್ಟ್ ತೀರ್ಪು ನಾಳೆಗೆ ಕಾಯ್ದಿರಿಸಿದೆ.