ETV Bharat / state

ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಕೋವಿಡ್-19 ತಪಾಸಣೆ - ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆ

ಧಾರವಾಡ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಹು-ಧಾ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಯಿತು.

Covid 19 test for pregnant women in hubli, ಹುಬ್ಬಳ್ಳಿಯಲ್ಲಿ ಗರ್ಭಿಣಿಯರಿಗೆ ಕೋವಿಡ್-19 ತಪಾಸಣೆ
ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಕೋವಿಡ್-19 ತಪಾಸಣೆ
author img

By

Published : May 27, 2020, 6:59 PM IST

ಹುಬ್ಬಳ್ಳಿ: ಕೊರೊನಾ ವೈರಸ್ ಭೀತಿ ಎಲ್ಲೆಡೆಯೂ ಹಬ್ಬುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಧಾರವಾಡ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಹು-ಧಾ ಮಹಾನಗರ ಪಾಲಿಕೆಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಯಿತು.

ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯಲ್ಲಿ ಗರ್ಭಿಣಿಯರಿಗೆ ಕೋವಿಡ್-19 ತಪಾಸಣೆ

ಗರ್ಭಿಣಿಯರಲ್ಲಿರುವ ಭಯವನ್ನು ನಿವಾರಣೆ ಮಾಡಲು ಹಾಗೂ ಕೊರೊನಾ ವೈರಸ್ ನಿಯಂತ್ರಣದ ಹಿನ್ನೆಲೆಯಲ್ಲಿ ಗರ್ಭಿಣಿಯರ ಗಂಟಲು ದ್ರವ ಹಾಗೂ ಮೂಗಿನ ದ್ರವದ ಮಾದರಿಯನ್ನು ಸಂಗ್ರಹಿಸಲಾಯಿತು.

ಈಗಾಗಲೇ ಮೂರು ದಿನಗಳಿಂದ ಕೋವಿಡ್-19 ಪರೀಕ್ಷೆ ಪ್ರಾರಂಭವಾಗಿದ್ದು, ಪ್ರತಿ ದಿನಕ್ಕೆ 60 ಜನರ ತಪಾಸಣೆ ಮಾಡಲಾಗುತಿದ್ದು, ಇಂದು ಮಧ್ಯಾಹ್ನದವರೆಗೆ 35 ಜನ ಗರ್ಭಿಣಿಯರ ಗಂಟಲು ಹಾಗೂ ಮೂಗಿನ ದ್ರವವನ್ನು ಸಂಗ್ರಹಿಸಲಾಯಿತು. ಇದೇ ವೇಳೆ ಮಾತನಾಡಿದ ಆರೋಗ್ಯಾಧಿಕಾರಿ ಡಾ.ಪ್ರಭು ಬಿರಾದಾರ, ‌ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಹಾಗೂ ಕೊರೊನಾ ವೈರಸ್ ನಿಯಂತ್ರಣದ ಹಿನ್ನೆಲೆಯಲ್ಲಿ ಗರ್ಭಿಣಿಯರ ಗಂಟಲು ದ್ರವ ಹಾಗೂ ಮೂಗಿನ ದ್ರವವನ್ನು ಸಂಗ್ರಹಿಸಿ ಪರೀಕ್ಷೆ ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ. ಗರ್ಭಿಣಿಯರು ಸ್ವಯಂಪ್ರೇರಿತವಾಗಿ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಳ್ಳಬೇಕು. ಅಲ್ಲದೇ ಯಾರಿಗಾದರೂ ರೋಗದ ಲಕ್ಷಣಗಳಿದ್ದರೇ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.