ಧಾರವಾಡ: ಜಿಲ್ಲೆಯಲ್ಲಿ 257 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದರಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,928 ಕ್ಕೇರಿದೆ.
ಇಂದು ಕೊರೊನಾಗೆ 6 ಜನ ಬಲಿಯಾಗಿದ್ದು, ಜಿಲ್ಲೆಯಲ್ಲಿ ಇಲ್ಲಿಯವರೆಗಿನ ಸಾವಿನ ಸಂಖ್ಯೆ 214. ಇಂದು 139 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೂ 4,325 ಜನರು ಸೋಂಕು ಮುಕ್ತರಾಗಿದ್ದಾರೆ.
ಜಿಲ್ಲೆಯಲ್ಲಿ 2,389 ಸಕ್ರಿಯ ಪ್ರಕರಣಗಳಿವೆ.