ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಕೋವಿಡ್ ವಾರ್ ರೂಂ ಆರಂಭಿಸಲು ಎಸಿ ಡಾ. ಗೋಪಾಲಕೃಷ್ಣ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿರುವ ವಾರ್ತಾ ಭವನ ಕಟ್ಟಡದಲ್ಲಿ ವಾರ್ ರೂಂ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ರಾಷ್ಟ್ರೀಯ ಮಾಹಿತಿ ಕೇಂದ್ರದ ಅಧಿಕಾರಿಗಳೊಂದಿಗೆ ಸಹಾಯಕ ಆಯುಕ್ತರು ಸಭೆ ನಡೆಸಿದರು.
ಬೆಂಗಳೂರು ಮಾದರಿಯಲ್ಲಿ ವಾರ್ ರೂಂ ಮಾಡಲು ಸಿದ್ಧತೆ ಮಾಡಿಕೊಳ್ಳುವ ಕುರಿತಂತೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಮೊದಲು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಿದ್ದ ಸ್ಥಳದಲ್ಲಿ ಇದೀಗ ಕೋವಿಡ್ ವಾರ್ ರೂಂ ಸ್ಥಾಪನೆ ಮಾಡಲಾಗುತ್ತಿದೆ.
ಜಿಲ್ಲಾ ಕೇಂದ್ರದಲ್ಲಿದ್ದ ಉಸ್ತುವಾರಿ ಸಚಿವರ ಕಚೇರಿಯನ್ನು ಸಚಿವ ಜಗದೀಶ್ ಶೆಟ್ಟರ್ ಹುಬ್ಬಳ್ಳಿಗೆ ವರ್ಗಾಯಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಲಿಯಿದ್ದ ಕಚೇರಿಯನ್ನು ಕೊವೀಡ್ ವಾರ್ ರೂಂ ಆಗಿ ಮಾಡಲಾಗುತ್ತಿದೆ.