ಹುಬ್ಬಳ್ಳಿ : ಕೋವಿಡ್ ಭೀತಿ ಹಿನ್ನೆಲೆ ಧಾರವಾಡ ಜಿಲ್ಲೆಯಲ್ಲಿ ಇಂದಿನಿಂದ ಕಠಿಣ ನಿಯಮ ಜಾರಿಯಾಗಿದ್ದರೂ ಕೂಡ ಜನ ಮಾತ್ರ ಯಾವುದಕ್ಕೂ ಜಗ್ಗುತ್ತಿಲ್ಲ. ಆದ್ರೆ, ಹು-ಧಾ ಮಹಾನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉಪನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡು ನಿಯಮ ಉಲ್ಲಂಘಿಸಿದವ್ರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ.
ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದರೂ ಕೂಡ ಜನ ಯಾವುದೇ ಭಯವಿಲ್ಲದೇ ಓಡಾಡುವ ದೃಶ್ಯ ಕಂಡು ಬಂದಿದೆ. ಹುಬ್ಬಳ್ಳಿಯ ಹಳೇ ಬಸ್ ನಿಲ್ದಾಣದಲ್ಲಿ ಜನಸಂದಣಿಯಾಗಿತ್ತು. ಬಸ್ಗಳೊಳಗೆ ಯಾರೂ ಕೂಡ ನಿಯಮ ಪಾಲಿಸಿರಲಿಲ್ಲ.
ಇದನ್ನೂ ಓದಿ: 'ಸಿಡಿ' ಕೇಸ್ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಹೈಕೋರ್ಟ್ಗೆ ಪಿಐಎಲ್
ಈ ಹಿನ್ನೆಲೆ ಹು-ಧಾ ಮಹಾನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಉಪನಗರ ಠಾಣೆ ಪೊಲೀಸರು ನಿಯಮ ಉಲ್ಲಂಘನೆ ಮಾಡಿದವ್ರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಮಾಸ್ಕ್ ಧರಿಸದೇ ಓಡಾಡುವವರಿಗೆ ದಂಡ ವಿಧಿಸಿ ಮಾಸ್ಕ್ ಧರಿಸುವಂತೆ ಸಲಹೆ ನೀಡುತ್ತಿದ್ದಾರೆ.