ETV Bharat / state

ನಾಳೆಯಿಂದ ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದ ವ್ಯಕ್ತಿಗಳಿಗೆ ಕೋವಿಡ್ ತಪಾಸಣೆ : ಜಿಲ್ಲಾಧಿಕಾರಿ - Tomorrow onward covid test in Dharwad

ಅವಳಿನಗರದಲ್ಲಿ ನಾಳೆಯಿಂದ ಮಾಸ್ಕ್ ಧರಿಸದ ವ್ಯಕ್ತಿಗಳ ಕೋವಿಡ್ ತಪಾಸಣೆ ನಡೆಸಲು ಜಿಲ್ಲಾಡಳಿತ ಮುಂದಾಗಿದೆ.

ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ
ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ
author img

By

Published : Aug 17, 2020, 9:58 PM IST

ಧಾರವಾಡ: ಕೋವಿಡ್ ತಪಾಸಣೆ ಪ್ರಮಾಣ ಹೆಚ್ಚು ಮಾಡಲು ನಾಳೆ ಅವಳಿನಗರ ಸೇರಿದಂತೆ ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದ ವ್ಯಕ್ತಿಗಳನ್ನು ಕಡ್ಡಾಯವಾಗಿ ಕೋವಿಡ್ ತಪಾಸಣೆಗೆ ಒಳಪಡಿಸುವ ಕಾರ್ಯಾಚರಣೆ ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಬಸ್ ನಿಲ್ದಾಣ, ಮಾರುಕಟ್ಟೆ ಮತ್ತಿತರ ಜನನಿಬಿಡ ಸ್ಥಳಗಳಲ್ಲಿ ಮಾಸ್ಕ್ ಧರಿಸದ ವ್ಯಕ್ತಿಗಳನ್ನು ತಪಾಸಣೆ ನಡಸಲು ಜಿಲ್ಲಾಡಳಿತ ಮುಂದಾಗಿದ್ದು, ಕಾರ್ಯಾಚರಣೆ ಕೈಗೊಳ್ಳಲು ತಂಡಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಎಲ್ಲಾ ತಹಶೀಲ್ದಾರ್ ನೇತೃತ್ವದಲ್ಲಿ ತಾ.ಪಂ.ಕಾರ್ಯ ನಿರ್ವಾಹಕ ಅಧಿಕಾರಿಗಳು, ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಮಹಾತ್ಮ ಗಾಂಧಿ ನರೇಗಾ ಸಹಾಯಕ ನಿರ್ದೇಶಕರು, ಪೊಲೀಸ್ ಇನ್ಸ್ ಪೆಕ್ಟರ್ ಮತ್ತಿತರ ಇಲಾಖೆಗಳ ಅಧಿಕಾರಿಗಳು ಹಾಗೂ ಡಾಟಾ ಎಂಟ್ರಿ ಆಪರೇಟರ್ ಗಳನ್ನು ಒಳಗೊಂಡ ಸಂಚಾರಿ ಕೋವಿಡ್ ತಪಾಸಣೆ ತಂಡಗಳು ಮಾಸ್ಕ್ ಧರಿಸಿದ ವ್ಯಕ್ತಿಗಳನ್ನು ಕೋವಿಡ್ ತಪಾಸಣೆ ಮಾಡುವ ಕಾರ್ಯಾಚರಣೆ ಕೈಗೊಳ್ಳಲಿವೆ.

ಎಲ್ಲಾ ನಗರ ಮತ್ತು ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗೆ ಬರುವ ಹೊರ ರೋಗಿಗಳನ್ನೂ ಕೂಡ ಕೋವಿಡ್ ತಪಾಸಣೆಗೆ ಒಳಪಡಿಸಬೇಕು. ಜಿಲ್ಲೆಯ ಕೋವಿಡ್ ಕೇರ್ ಸೆಂಟರುಗಳಲ್ಲಿ ಉತ್ತಮ ಊಟ ಪೂರೈಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಬಂದಿದೆ. ಕ್ರೀಡಾ, ಮನರಂಜನಾ ಚಟುವಟಿಕೆಗಳನ್ನು ಕ್ರಿಯಾಶೀಲವಾಗಿರಿಸಬೇಕು. ಔಷಧ ದಾಸ್ತಾನು ಸಮರ್ಪಕವಾಗಿರಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.