ಹುಬ್ಬಳ್ಳಿ: ಐಪಿಎಲ್ ಹೆಸರಿನಲ್ಲಿ ಬೆಟ್ಟಿಂಗ್ ದಂಧೆ ಎಲ್ಲೆಡೆ ನಡೆಯುತ್ತಿದೆ. ಯುವಕರನ್ನೇ ಟಾರ್ಗೆಟ್ ಮಾಡುವ ಬುಕ್ಕಿಗಳು ಅವರನ್ನು ಜೂಜಾಟಕ್ಕೆ ಪ್ರೇರೇಪಿಸುತ್ತಿದ್ದಾರೆ. ಹು-ಧಾ ಅವಳಿ ನಗರದಲ್ಲಿಯೂ ಬೆಟ್ಟಿಂಗ್ ಎಗ್ಗಿಲ್ಲದೇ ನಡೆಯುತ್ತಿದೆ.
ಈಗಾಗಲೇ ಹುಬ್ಬಳ್ಳಿ ಶಹರ, ಉಪನಗರ ಹಾಗೂ ಧಾರವಾಡ ಶಹರ ಹಾಗೂ ಉಪನಗರ ಪೊಲೀಸ್ ಠಾಣೆಯಲ್ಲಿ ಬೆಟ್ಟಿಂಗ್ ನಡೆಯುತ್ತಿರುವ ಬಗ್ಗೆ ದೂರುಗಳು ದಾಖಲಾಗಿವೆ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿರುವ ಪೊಲೀಸರು ಬೆಟ್ಟಿಂಗ್ ಕುಳಗಳನ್ನು ಹೆಡೆಮುರಿ ಕಟ್ಟಿದ್ದಾರೆ.
ಹುಬ್ಬಳ್ಳಿಯ ಬಹುತೇಕ ಕಡೆಗಳಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಯುವಕರು ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡು ಮಾನಸಿಕ ಖಿನ್ನತೆಗೆ ಒಳಗಾಗುತ್ತಿರುವ ನಿದರ್ಶನಗಳಿವೆ. ಈ ದಂಧೆಯಲ್ಲಿ ತೊಡಗುವುದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಕೂಡ ಯುವಕರು ಸಕ್ರಿಯರಾಗಿ ಪಾಲ್ಗೊಳ್ಳುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ.
ಇದನ್ನೂ ಓದಿ: ಹಾಸನದಲ್ಲಿ ಕೋವಿಡ್ ಹೆಚ್ಚಳ: ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾದ ಅಧಿಕಾರಿಗಳು