ಹುಬ್ಬಳ್ಳಿ: ನಗರದ ಕೆಂಪಗೇರಿಯಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರನ್ನು ಸಿಸಿಬಿ ಹಾಗೂ ಸಿಸಿಐಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ಚೇತನಾ ಕಾಲೋನಿ ನಿವಾಸಿ ಧರ್ಮೇಂದ್ರ ಚೌಧರಿ, ಕೇಶವಾಪುರದ ಸದಾನಂದ ಬದ್ದಿ, ಜೆಸಿ ನಗರದ ಪಾರಸಮಲ್ ರಾಠೋಡ ಬಂಧಿತ ಆರೋಪಿಗಳು. ಇವರು ಹಳೆ ಹುಬ್ಬಳ್ಳಿಯ ಕುಲ್ಲಾ ಜಾಗದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಹಾಗೂ ಸಿಸಿಐಬಿ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರಿಂದ 6,28,500 ರೂ. ನಗದು ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.