ETV Bharat / state

ಧಾರವಾಡದಲ್ಲಿ ಅಪರಿಚಿತ ವಾಹನ ಡಿಕ್ಕಿ: ಕಾನ್​ಸ್ಟೇಬಲ್​ ಸಾವು, ಮಹಿಳಾ ಸಿಬ್ಬಂದಿಗೆ ಗಂಭೀರ ಗಾಯ - etv bharat kannada

ಗಣೇಶೋತ್ಸವ ಬಂದೋಬಸ್ತ್ ಕರ್ತವ್ಯ ಮುಗಿಸಿಕೊಂಡು ಮರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್ ಕಾನ್​ಸ್ಟೇಬಲ್​ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

crime-police-constable-killed-in-collision-with-unknown-vehicle-in-dharwad
ಧಾರವಾಡದಲ್ಲಿ ಅಪರಿಚಿತ ವಾಹನ ಡಿಕ್ಕಿ: ಕಾನ್ಸ್​ಟೇಬಲ್​ ಸಾವು, ಮಹಿಳಾ ಸಿಬ್ಬಂದಿಗೆ ಗಂಭೀರ ಗಾಯ
author img

By ETV Bharat Karnataka Team

Published : Sep 20, 2023, 10:43 PM IST

ಧಾರವಾಡ: ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್ ಕಾನ್​ಸ್ಟೇಬಲ್​ವೊಬ್ಬರು​ ಸ್ಥಳದಲ್ಲೇ ಸಾನ್ನಪ್ಪಿರುವ ಘಟನೆ ಧಾರವಾಡ ಹೊರವಲಯದ ಇಟ್ಟಿಗಟ್ಟಿ ಬೈಪಾಸ್‌ನಲ್ಲಿ ಬುಧವಾರ ನಡೆದಿದೆ. ಹುಚ್ಚೇಶ ಹಿರೇಗೌಡರ (37) ಮೃತ ಕಾನ್​ಸ್ಟೇಬಲ್. ಬೈಕ್​ ಹಿಂಬದಿ ಕುಳಿತಿದ್ದ ಮಹಿಳಾ ಕಾನ್​ಸ್ಟೇಬಲ್ ಲಕ್ಷ್ಮೀ ಎಂಬುವರು ಗಂಭೀರ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ರವಾನಿಸಲಾಗಿದೆ. ಛಬ್ಬಿ ಗಣೇಶೋತ್ಸವ ಬಂದೋಬಸ್ತ್ ಕರ್ತವ್ಯ ಮುಗಿಸಿಕೊಂಡು ಬೈಕ್​ನಲ್ಲಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರು ಪಲ್ಟಿ.. ಪ್ರಮಾಣಿಕರಿಗೆ ಗಾಯ: ಮತ್ತೊಂದೆಡೆ, ಅತಿ ವೇಗದಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬೈರಾಪಟ್ಟಣ ಗ್ರಾಮದಲ್ಲಿ ನಡೆದಿದೆ. ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ನೂತನ ಹೆದ್ದಾರಿಯಲ್ಲಿ ಬೈರಾಪಟ್ಟಣ ಬಳಿ ವೇಗವಾಗಿ ಬಂದ ಹಿನ್ನೆಲೆಯಲ್ಲಿ ಚಾಲಕನ ನಿನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರು ಪಲ್ಟಿಯಾಗಿ ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.

ಕಾರು ಚಾಲನೆ ಮಾಡುತ್ತಿದ್ದ ಮಹಿಳೆ ಹಾಗೂ ಇತರೆ ಮೂವರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಗಿದ್ದು, ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಚನ್ನಪಟ್ಟಣ ಸಂಚಾರಿ ಠಾಣೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ದೂರು ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ನೆಲಮಂಗಲ: ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು, ಇಬ್ಬರಿಗೆ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.