ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ವಿನಯ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿಕೊಳ್ಳಲಾಗಿದೆ. ವಿನಯ್ ಸೇರಿ ಎಂಟು ಆರೋಪಿಗಳಿಗೆ ಧಾರವಾಡದ ಜೆಎಂಎಫ್‌ಸಿ ನ್ಯಾಯಾಲಯದಿಂದ ಸಮನ್ಸ್ ನೀಡಲಾಗಿದೆ.
ನ್ಯಾಯಾಲಯಕ್ಕೆ ಸಿಬಿಐನಿಂದ ಖಾಸಗಿ ದೂರು ಸಲ್ಲಿಸಲಾಗಿತ್ತು. ಸಿಬಿಐ ಅರ್ಜಿ ಪುರಸ್ಕರಿಸಿದ ಕೋರ್ಟ್ ಕ್ರಿಮಿನಲ್ ಕೇಸ್ ದಾಖಲಿಸಿಕೊಂಡಿದೆ. 195 A ಅಡಿ ಕೋರ್ಟ್ ಕೇಸು ದಾಖಲಿಸಿದೆ.