ಧಾರವಾಡ : ಹಿಜಾಬ್ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ನೀಡಿದ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಿಆರ್ಪಿಎಫ್ ಪಡೆ ಪಥಸಂಚಲನ ನಡೆಸಿತು. ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪಥ ಸಂಚಲನ ನಡೆಸಲಾಯಿತು.
ನಗರದ ಕಲಾಭವನದಿಂದ ಪ್ರಾರಂಭಗೊಂಡ ಪಥಸಂಚಲನ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಜಿಲ್ಲಾಡಳಿತ ಕೂಡ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮಾ.15 ರಿಂದ 19ರವರೆಗೆ 144 ಜಾರಿಗೊಳಿಸಿ ಆದೇಶ ಹೊರಡಿಸಿದೆ. ಇದೀಗ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಂದೇಶ ನೀಡಲು ರೂಟ್ ಮಾರ್ಚ್ ನಡೆಸಿದೆ.