ಧಾರವಾಡ: ಜಿಲ್ಲೆಯಲ್ಲಿ ಅವಧಿ ಮುಕ್ತಾಯವಾದ ಗ್ರಾಮ ಪಂಚಾಯತಿಗೆ ಸಾರ್ವತ್ರಿಕ ಚುನಾವಣೆ ಹಾಗೂ ವಿವಿಧ ಕಾರಣಗಳಿಂದ ತೆರವಾದ ಸದಸ್ಯ ಸ್ಥಾನಗಳಿಗೆ ಅಕ್ಟೋಬರ್ 28 ರಂದು ಉಪ ಚುನಾವಣೆ ನಡೆಯಲಿದೆ.
ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಅಕ್ಟೋಬರ್ 26 ರಂದು ರಾತ್ರಿ 11.59 ಗಂಟೆಯಿಂದ ಅ.28 ರ ಬೆಳಗಿನ 6 ಗಂಟೆಯವರೆಗೆ 19 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರದೇಶಗಳಲ್ಲಿ ಮದ್ಯಪಾನ, ಮಾರಾಟ ಹಾಗು ಮದ್ಯ ಸಾಗಾಣಿಕೆಯನ್ನು ನಿಷೇಧಿಸಲಾಗಿದೆ.
ಇದನ್ನೂ ಓದಿ: ಕರ್ತವ್ಯಕ್ಕೆ ಹಾಜರಾದ ದಿನವೇ ಲಂಚ ಆರೋಪ; ಪ್ರೊಬೇಷನರಿ ಅಬಕಾರಿ ನಿರೀಕ್ಷಕಿ ಎಸಿಬಿ ವಶಕ್ಕೆ