ETV Bharat / state

ಸಂವಿಧಾನ ಶಿಲ್ಪಿಗೆ ಅವಮಾನ..? ಅಧಿಕಾರಿಯ ಗಡಿಪಾರಿಗೆ ಆಗ್ರಹ - ಧಾರವಾಡದಲ್ಲಿ ಪ್ರತಿಭಟನೆ

ಡಾ. ಬಿ.ಆರ್. ಅಂಬೇಡ್ಕರವರಿಗೆ ಅವಮಾನಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಯನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಧಾರವಾಡದಲ್ಲಿ ಪ್ರತಿಭಟನೆ
author img

By

Published : Nov 15, 2019, 1:06 PM IST

ಧಾರವಾಡ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರವರಿಗೆ ಅವಮಾನಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಯನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಜಿಲ್ಲೆಯ ವಿವಿಧ ದಲಿತ ಒಕ್ಕೂಟ ಸಮಿತಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ, ಅಧಿಕಾರಿಯ ವಿರುದ್ಧ ಧಿಕ್ಕಾರ ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ದಿನಾಂಕ 28-10-2019 ರಂದು ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದ ಪುಟ 5ರಲ್ಲಿ, ಸಂವಿಧಾನವನ್ನು ಅಂಬೇಡ್ಕರ್ ಒಬ್ಬರೇ ಬರೆದಿಲ್ಲ ಎಂದು ಉಲ್ಲೇಖಿಸಿ ಅಂಬೇಡ್ಕರ್​ ಅವರಿಗೆ ಅಪಮಾನ ಮಾಡಲಾಗಿದೆ ಎಂದು ಕಿಡಿಕಾರಿದರು. ಶಿಕ್ಷಣ ಇಲಾಖೆಯ ನಿರ್ದೇಶಕರು ಹಾಗೂ ಆಯುಕ್ತರಿಗೆ ಸಂವಿಧಾನದ ಚಾರಿತ್ರಿಕ ಹಿನ್ನೆಲೆಯ ಅರಿವಿಲ್ಲ ಎಂದು ಆರೋಪಿಸಿದರು.

ಧಾರವಾಡದಲ್ಲಿ ಪ್ರತಿಭಟನೆ

ಇದರಿಂದ ಸಂವಿಧಾನ ರಚಿಸಿದ ಅಂಬೇಡ್ಕರ್ ಅವರ ಗೌರವಕ್ಕೆ ಧಕ್ಕೆ ತಂದಂತಾಗಿದೆ. ಆದ್ದರಿಂದ ಶಿಕ್ಷಣ ಇಲಾಖೆಯ ಅಧಿಕಾರಿಯನ್ನು ಭಾರತದಿಂದ ಗಡಿಪಾರು ‌ಮಾಡುವಂತೆ ಆಗ್ರಹಿಸಿದರು. ಬಳಿಕ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.

Intro:ಧಾರವಾಡ: ಅಂಬೇಡ್ಕರವರಿಗೆ ಅವಮಾನಿಸಿದ ಶಿಕ್ಷಣ ಇಲಾಖೆ ಅಧಿಕಾರಿಯನ್ನು ಗಡಿಪಾರು ಮಾಡುವಂತೆ ಒತ್ತಾಯಿಸಿ ಜಿಲ್ಲಾ ವಿವಿಧ ದಲಿತ ಒಕ್ಕೂಟ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ದಲಿತ ಒಕ್ಕೂಟ ಸಮಿತಿ ಕಾರ್ಯಕರ್ತರು ಅಧಿಕಾರಿ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿ ದೀಪಾ ಚೋಳನ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.

೨೮-೧೦-೨೦೧೯ ರಂದು ಶಿಕ್ಷಣ ಇಲಾಖೆ ಹೊರಡಿಸಿದ ಆದೇಶದ ಪುಟ ೫ ರಲ್ಲಿ ಕಂಡಿಕೆ ೭ ರಲ್ಲಿ ಸಂವಿಧಾನ ಅಂಬೇಡ್ಕರ್ ಅವರೊಬ್ಬರೇ ಬರೆದಿಲ್ಲ ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅಪಮಾನಿಸಿದ್ದಾರೆ. ಶಿಕ್ಷಣ ಇಲಾಖೆಯ ನಿರ್ದೇಶಕರಿಗೂ ಮತ್ತು ಆಯುಕ್ತರಿಗೆ ಸಂವಿಧಾನದ ಚಾರಿತ್ರಿಕ ಹಿನ್ನೆಲೆ ಅರಿವಿಲ್ಲ ಎಂದು ಆರೋಪಿಸಿದರು.Body:ಸಂವಿಧಾನದ ರಚಿಸಿದ ಅಂಬೇಡ್ಕರ್ ಅವರ ಗೌರವಕ್ಕೆ ಚ್ಯುತಿ ಆಗುತ್ತಿದೆ. ಇದು ಅಪಮಾನ ಮಾಡಿದಂತಾಗುತ್ತದೆ ಆದರಿಂದ ಶಿಕ್ಷಣ ಇಲಾಖೆಯ ಅಧಿಕಾರಿಯನ್ನು ಭಾರತದಿಂದ ಗಡಿಪಾರು ‌ಮಾಡುವಂತೆ ಆಗ್ರಹಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.