ಧಾರವಾಡ: ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ದಲಿತ ವಿದ್ಯಾರ್ಥಿಗಳ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಮಾಡಿಕೊಂಡರು.
ಬೇಡಿಕೆಗಳು:
ರಾಜ್ಯಾದ್ಯಂತ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಹಾಸ್ಟೆಲ್ಗಳಿಗೆ ಮೂಲಭೂತ ಸೌಕರ್ಯ ನೀಡಿ ಗುಣಮಟ್ಟ ಕಾಯ್ದಿರಿಸಬೇಕು. ಈಗ ನೀಡುತ್ತಿರುವ ವಿದ್ಯಾರ್ಥಿ ವೇತನ ಹೆಚ್ಚಿಸಿ ಇಂದಿನ ಬೆಲೆ ಏರಿಕೆಗೆ ಅನುಗುಣವಾಗಿ ವಿದ್ಯಾರ್ಥಿ ವೇತನ ನೀಡಬೇಕು. ಹಳೆಯ ಹಾಸ್ಟೆಲ್ ಕಟ್ಟಡಗಳನ್ನು ನವೀಕರಿಸುವ ಬದಲಾಗಿ ಹೊಸ ವಿನ್ಯಾಸ ತಯಾರಿಸಿ ಮಾದರಿ ಕಟ್ಟಡ ನಿರ್ಮಿಸಬೇಕು, ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
.