ETV Bharat / state

ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಕುರಿತು ರೈತರಿಗೆ ಮಾಹಿತಿ ನೀಡಿ: ಡಿಸಿ

ಕೃಷಿ ಇಲಾಖೆ ಅಧಿಕಾರಿಗಳು ಮತ್ತು ವಿಮಾ ಕಂಪನಿಯ ಪ್ರತಿನಿಧಿಗಳು ಹೋಬಳಿ ಮತ್ತು ಗ್ರಾಮ ಮಟ್ಟದಲ್ಲಿ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಕುರಿತು ರೈತರಿಗೆ ಪೂರಕ ಮಾಹಿತಿ ಹಾಗೂ ತಿಳುವಳಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದರು.

Deepa cholan
Deepa cholan
author img

By

Published : Jun 17, 2020, 12:39 AM IST

​​​​​​ಧಾರವಾಡ: ಕರ್ನಾಟಕ ರೈತ ಸುರಕ್ಷತಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯನ್ನು 2020ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳ್ಳಿಸಲು ಸರ್ಕಾರ ಮಂಜೂರಾತಿ ನೀಡಿದ್ದು, ಕೃಷಿ ಇಲಾಖೆ ಅಧಿಕಾರಿಗಳು ಮತ್ತು ವಿಮಾ ಕಂಪನಿಯ ಪ್ರತಿನಿಧಿಗಳು, ಹೋಬಳಿ ಮತ್ತು ಗ್ರಾಮ ಮಟ್ಟದಲ್ಲಿ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಕುರಿತು ರೈತರಿಗೆ ಪೂರಕ ಮಾಹಿತಿ ಹಾಗೂ ತಿಳುವಳಿಕೆ ನೀಡಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದರು.

ನಿನ್ನೆ ಸಂಜೆ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರೈತ ಸುರಕ್ಷತಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ಕುರಿತು ಕೃಷಿ ತೋಟಗಾರಿಕೆ, ಲೀಡ್ ಬ್ಯಾಂಕ್, ವಿಮಾ ಕಂಪನಿ ಮತ್ತು ಜಿಲ್ಲಾ ಅಂಕಿಸಂಖ್ಯೆ ಇಲಾಖೆಯ ಅಧಿಕಾರಿಗಳ ಸಭೆ ಜರುಗಿಸಿ ಮಾತನಾಡಿದ ಡಿಸಿ, ಜಿಲ್ಲೆಯ ಮುಖ್ಯ ಹಾಗೂ ಇತರೆ ಬೆಳೆಗಳನ್ನು ತಾಲೂಕುವಾರು ಪರಿಗಣಿಸಿ ಆಯಾ ತಾಲೂಕಿನ ಮುಖ್ಯ ಬೆಳೆಗಳಿಗೆ ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳನ್ನು ವಿಮಾ ಘಟಕವಾಗಿ ಹಾಗೂ ಇತರೆ ಬೆಳೆಗಳಿಗೆ ಹೋಬಳಿಯನ್ನು ವಿಮಾ ಘಟಕವಾಗಿ ಪರಿಗಣಿಸಿ ವಿವಿಧ ಆಹಾರ, ಎಣ್ಣೆಕಾಳು, ವಾರ್ಷಿಕ ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳನ್ನು ಪಟ್ಟಿ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ಹೇಳಿದರು.

ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ಕೂಡಲೇ ಬ್ಯಾಂಕ್‍ಗಳು ರೈತರ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ಬೆಳೆ ಸಾಲ ಪಡೆಯುವ ಮತ್ತು ಬೆಳೆ ಸಾಲ ಪಡೆಯದ ರೈತರಿಗೆ ವಿಮಾ ಮೊತ್ತವು ಬೆಳೆವಾರು ಬೆಳೆಸಾಲದ ಪ್ರಮಾಣದ ಆಧಾರದ ಮೇಲೆ ಸರ್ಕಾರದಿಂದ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಈಗಾಲೇ ಆರಂಭವಾಗಿದ್ದು, ರೈತರಿಗೆ ವಿಮಾ ಯೋಜನೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿ ಕರ್ನಾಟಕ ರೈತ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ವ್ಯಾಪ್ತಿಗೆ ಪ್ರತಿಯೊಬ್ಬ ರೈತ ಕೂಡಾ ಹೆಸರು ನೋಂದಾಯಿಸುವಂತೆ ಮತ್ತು ವಿಮೆಯ ಲಾಭವನ್ನು ಎಲ್ಲಾ ರೈತರಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಇಲಾಖೆ, ವಿಮಾ ಕಂಪನಿ ಮತ್ತು ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ಐ.ಬಿ. ಈ ಕುುರಿತ ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.