ಧಾರವಾಡ : ಧಾರವಾಡದ ಕುಮಾರೇಶ್ವರ ನಗರದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ವಿಚಾರಣೆ ಭಾಗವಾಗಿ ಜಿಲ್ಲಾಧಿಕಾರಿ ದೀಪಾ ಚೋಳನ್ ಸ್ಥಳ ಪರಿಶೀಲನೆ ನಡೆಸಿದರು.
ಮಹಾನಗರ ಪಾಲಿಕೆ ಅಧಿಕಾರಿಗಳು, ಕಂದಾಯ, ನಗರ ಯೋಜನಾ ವಿಭಾಗ ಮತ್ತು ಇಂಜಿನಿಯರ್ಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಜಿಲ್ಲಾಧಿಕಾರಿ ದೀಪಾ ಚೋಳನ್ ಮಾತನಾಡಿ, ಕಟ್ಟಡ ದುರತದಲ್ಲಿ 19 ಮಂದಿ ಸಾವನ್ನಪ್ಪಿದ್ದರು. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿದ್ದು, ತನಿಖೆ ಇದೀಗ ಕೊನೆ ಹಂತ ತಲುಪಿದೆ. ಹಾಗೂ ಡಿಸೆಂಬರ್ ಮೊದಲ ವಾರದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.
ಕಟ್ಟಡ ದುರಂತದ ಮಾಲೀಕರು ಗಾಯಾಳುಗಳು ಬಾಡಿಗೆದಾರರು ಸೇರಿದಂತೆ ಸಾಕ್ಷಿದಾರರಿಂದ ಮಾಹಿತಿ ಸಂಗ್ರಹ ಮಾಡಲಾಗಿದೆ. ಕಟ್ಟಡದ ಅವಶೇಷಗಳನ್ನು ಶೀಘ್ರದಲ್ಲಿ ಜಿಲ್ಲಾಡಳಿತ ಹರಾಜು ಹಾಕಲಿದೆ. ಈ ಬಗ್ಗೆ ಪಾಲಿಕೆ ಅಧಿಕಾರಿಗಳು ಪ್ರಕ್ರಿಯೆ ನಡೆಸಿದ್ದಾರೆ ಎಂದು ಮಾಹಿತಿ ನೀಡಿದರು.