ETV Bharat / state

ಪರದಾಡುತ್ತಿದ್ದ ಕೂಲಿ ಕಾರ್ಮಿಕರಿಗೆ ಜಿಲ್ಲಾಡಳಿತದಿಂದ ಸಿಕ್ತು ಊಟ... ಇದು ಈಟಿವಿ ಫಲಶ್ರುತಿ - ಹುಬ್ಬಳ್ಳಿ ಲೇಟೆಸ್ಟ್ ನ್ಯೂಸ್​

ಇಡೀ ದೇಶವನ್ನೇ ಕಾಡುತ್ತಿರುವ ಕೊರೊನಾ ನಿಯಂತ್ರಣಕ್ಕೆ ಲಾಕ್​ಡೌನ್​ ಆದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಜಿಲ್ಲಾಡಳಿದ ಆದೇಶದ ಮೇರೆಗೆ ತಾಲೂಕು ಆಡಳಿತ ಊಟದ ವ್ಯವಸ್ಥೆ ಮಾಡುವ ಕೆಲಸ ಮಾಡುವ ಮೂಲಕ ಮಾನವೀಯತೆ ಮೆರೆದಿದೆ. ಈಟಿವಿ ಭಾರತ ವರದಿಗೆ ಜಿಲ್ಲಾಡಳಿತ ಸ್ಪಂದಿಸಿದೆ.

ಪರದಾಡುತ್ತಿದ್ದ ಕೂಲಿ ಕಾರ್ಮಿಕರಿಗೆ ಊಟದ ವ್ಯವಸ್ಥೆ ಮಾಡಿದ ಜಿಲ್ಲಾಡಳಿತ
DC gave food facility to Workers and Kims hospital Relatives of patients at Hubli
author img

By

Published : Apr 15, 2020, 10:54 AM IST

ಹುಬ್ಬಳ್ಳಿ: ಆಹಾರವಿಲ್ಲದೆ ಪರದಾಡುತ್ತಿದ್ದ ಕೂಲಿ ಕಾರ್ಮಿಕರು ಹಾಗೂ ಕಿಮ್ಸ್ ಆಸ್ಪತ್ರೆಯಲ್ಲಿರುವ ರೋಗಿಗಳ ಸಂಬಂಧಿಗಳ ಹಸಿವಿನ ಸಮಸ್ಯೆಗೆ ಜಿಲ್ಲಾಡಳಿತ ಸ್ಪಂದಿಸಿದೆ. ಈಟಿವಿ ಭಾರತ ವರದಿ ಬಳಿಕ ಜಿಲ್ಲಾಡಳಿತದ ಆದೇಶದ ಮೇರೆಗೆ ತಾಲೂಕು ಆಡಳಿತ ಊಟದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದಿದೆ.

DC gave food facility to Workers and Kims hospital Relatives of patients at Hubli
ಪರದಾಡುತ್ತಿದ್ದ ಕೂಲಿ ಕಾರ್ಮಿಕರಿಗೆ ಊಟದ ವ್ಯವಸ್ಥೆ ಮಾಡಿದ ಜಿಲ್ಲಾಡಳಿತ

ಈ ಕುರಿತಂತೆ 'ಈಟಿವಿ ಭಾರತ' 'ನೀವು ಬಂದಿದ್ದೇ ನಮ್ಮ ಪುಣ್ಯ, ಇಲ್ಲಂದ್ರೆ ನೀರು ಕುಡಿದು ಮಲಗಬೇಕಿತ್ರೀ'... ಕಿಮ್ಸ್ ಆಸ್ಪತ್ರೆಯಲ್ಲಿರುವವರ ಅಳಲು ಎಂಬ ವರದಿಯನ್ನು ಪ್ರಕಟಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್​, ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದ್ದರು. ಅದರಂತೆ ನಾನಾ ಜಿಲ್ಲೆಗಳಿಂದ ನಗರಕ್ಕೆ ಕೆಲಸಕ್ಕಾಗಿ ಬಂದಿದ್ದ ಕೂಲಿ ಕಾರ್ಮಿಕರಿಗೆ ಹಾಗೂ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಜೊತೆ ಬಂದಿರುವ ಅವರ ಸಂಬಂಧಿಕರಿಗೆ ಊಟದ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

'ನೀವು ಬಂದಿದ್ದೇ ನಮ್ಮ ಪುಣ್ಯ, ಇಲ್ಲಂದ್ರೆ ನೀರು ಕುಡಿದು ಮಲಗಬೇಕಿತ್ರೀ'... ಕಿಮ್ಸ್ ಆಸ್ಪತ್ರೆಯಲ್ಲಿರುವವರ ಅಳಲು

ನಗರದ ಬಿಆರ್​ಟಿಎಸ್ ಬಸ್ ನಿಲ್ದಾಣ, ಉಣಕಲ್ಲಿನ ರಾಮಲಿಂಗೇಶ್ವರ ದೇವಸ್ಥಾನ, ಶಿರೂರ್ ಪಾರ್ಕ್ ವಿವಿಧ ಸ್ಥಳಗಳಲ್ಲಿ ವಾಸವಾಗಿರುವ ಕೂಲಿ ಕಾರ್ಮಿಕರಿಗೆ ಕಂದಾಯ ಇಲಾಖೆ ನಿರೀಕ್ಷಕರು ಹಾಗೂ ಲೆಕ್ಕಾಧಿಕಾರಿಗಳ ತಂಡದವರು ವಿವಿಧ ಕಡೆ ಸಂಚರಿಸಿ ಊಟ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಈ ಲಾಕ್​ಡೌನ್​ ಅವಧಿಯಲ್ಲಿ ಎಷ್ಟೇ ಬ್ಯುಸಿಯಾಗಿದ್ದರೂ ಕೂಲಿ ಕಾರ್ಮಿಕರ ನೋವಿಗೆ ಸ್ಪಂದಿಸಿ ಮಾನವೀಯತೆ ಮೆರೆದಿರುವುದು ಅಧಿಕಾರಿಗಳ ದೊಡ್ಡಗುಣ. ಈಟಿವಿ ಭಾರತ ವರದಿಗೆ ಸ್ಪಂದಿಸಿ ಬಡಪಾಯಿಗಳ ಹಸಿವು ನೀಗಿಸಿದ ಜಿಲ್ಲಾಡಳಿತಕ್ಕೆ ಧನ್ಯವಾದ ತಿಳಿಸುತ್ತೇವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.