ಧಾರವಾಡ : ಜಿಲ್ಲೆಯಲ್ಲಿ ಕರೊನಾ ಹೆಚ್ಚಳ ಹಿನ್ನೆಲೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಖುದ್ದು ಫೀಲ್ಡ್‌ಗಿಳಿದು ಮಾರ್ಕೆಟ್ ರೌಂಡ್ಸ್ ಹಾಕಿ ಮಾಸ್ಕ್ ಇಲ್ಲದವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ಜಿಲ್ಲೆಯಲ್ಲಿ ಕೊರೊನಾ ದಿನೇದಿನೆ ಹೆಚ್ಚಾಗುತ್ತಿದೆ. ಹಾಗಾಗಿ, ಖುದ್ದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ನೇತೃತ್ವದಲ್ಲಿ ಅಧಿಕಾರಿಗಳು ಸಾರ್ವಜನಿಕರಿಗೆ ಕೊರೊನಾ ರೂಲ್ಸ್ ಫಾಲೋ ಮಾಡುವಂತೆ ಎಚ್ಚರಿಕೆ ನೀಡುತ್ತಿದ್ದಾರೆ.
ನಗರದ ಸೂಪರ್ ಮಾರ್ಕೆಟ್, ಸುಭಾಷ ರಸ್ತೆ ಸೇರಿದಂತೆ ವಿವಿಧ ಮಾರ್ಕೆಟ್ ಸ್ಥಳಗಳಲ್ಲಿ ಜಿಲ್ಲಾಧಿಕಾರಿ ಸಂಚಾರ ಮಾಡಿದರು. ಕೆಲ ಅಂಗಡಿಗಳಿಗೆ ತೆರಳಿ ಮಾಸ್ಕ್ ಇಲ್ಲದೇ ಕುಳಿತಿದ್ದ ವ್ಯಾಪಾರಿಗಳಿಗೆ ಕೇಸ್ ಹಾಕುವ ಎಚ್ಚರಿಕೆ ನೀಡಿದರು.