ETV Bharat / state

ಕ್ಯಾನ್ಸರ್ ಪೀಡಿತನಿಗೆ ಬೆಂಗಳೂರಿನಿಂದ ಔಷಧಿ ತರಿಸಿಕೊಟ್ಟ ಡಿಸಿ ದೀಪಾ ಚೋಳನ್‌.. ತಾಯಿ ಕಣಮ್ಮ ನೀವು!!

author img

By

Published : May 1, 2020, 8:24 PM IST

ಔಷಧಿ ಬಂದ ನಂತರ ಅದನ್ನು ನೇರವಾಗಿ ರೋಗಿಗೆ ಕೊಡುವ ಮೊದಲು ರಕ್ತ ಪರೀಕ್ಷೆಯೊಂದು ಕಡ್ಡಾಯವಾಗಿತ್ತು. ಆಗ ನವನಗರದ ಕ್ಯಾನ್ಸರ್ ಆಸ್ಪತ್ರೆಯ ಡಾ.ಉಮೇಶ ಹಳ್ಳಿಕೇರಿಯವರನ್ನು ಸಂಪರ್ಕಿಸಿದಾಗ ಅವರೂ ಕೂಡ ಉಚಿತವಾಗಿ ಪರೀಕ್ಷೆ ಮಾಡಿ ವರದಿ ನೀಡಿದ್ದಾರೆ.

DC Help For cancer Patient
ಜಿಲ್ಲಾಧಿಕಾರಿಗಳ ಸೂಚನೆ

ಧಾರವಾಡ : ಲಾಕ್​ಡೌನ್ ಅವಧಿಯಲ್ಲಿ ಬಿಡುವಿಲ್ಲದೇ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಅವರ ಸಿಬ್ಬಂದಿ ತಮ್ಮ ಕಾರ್ಯದೊತ್ತಡದ ಮದ್ಯೆಯೂ ಮಾನವೀಯತೆಯಿಂದ ಕ್ಯಾನ್ಸರ್ ಪೀಡಿತ ವ್ಯಕ್ತಿಗೆ ಬೆಂಗಳೂರಿನಿಂದ ಔಷಧಿ ತರಿಸಿ ಕೊಟ್ಟಿದ್ದಾರೆ.

ನಗರದ ಚರಂತಿಮಠ ಗಾರ್ಡನ್ನಿನ ಜೈ ಜಿನೇಂದ್ರ ಕಾಲೋನಿಯ ನಿವಾಸಿ ಶಕುಂತಲಾ ಎಂಬ ವಯೋವೃದ್ದೆಯೊಬ್ಬರು ಬೆಂಗಳೂರಿಗೆ ಹೋಗಿ ಕ್ಯಾನ್ಸರ್ ಪೀಡಿತನಾಗಿರುವ ತನ್ನ 27 ವರ್ಷದ ಮೊಮ್ಮಗ ಸುನೀಲ್‌ ಎಂಬುವನಿಗೆ ಔಷಧಿ ತೆಗೆದುಕೊಂಡು ಬರಲು ವಾಹನ ಪಾಸ್ ಪಡೆಯಲು ಬಂದಾಗ ಜಿಲ್ಲಾಧಿಕಾರಿಯವರನ್ನು ಭೇಟಿಯಾಗಿ ತನ್ನ ಸಮಸ್ಯೆ ಹೇಳಿಕೊಂಡಿದ್ದಾರೆ. ಆಗ ಜಿಲ್ಲಾಧಿಕಾರಿಗಳು ಪಾಸ್ ವಿತರಣೆ ವಿಭಾಗದ ಸಿಬ್ಬಂದಿಯನ್ನು ಕರೆದು ಈ ಅಜ್ಜಿಗೆ ಸಹಾಯ ಮಾಡಲು ಸೂಚಿಸಿದರು.

ಕ್ಯಾನ್ಸರ್ ಪೀಡಿತನಾಗಿರುವ ಮೊಮ್ಮಗನಿಗೆ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರತಿ ತಿಂಗಳು ಸುಮಾರು 30 ಸಾವಿರ ರೂ.ಮೌಲ್ಯದ ಔಷಧಿ, ಮಾತ್ರೆಗಳು ಬೇಕಾಗುತ್ತದೆ. ಕಿದ್ವಾಯಿಯಲ್ಲಿ ಈ ಮಾತ್ರೆಗಳು ಅಲ್ಲಿನ ವೈದ್ಯ ಡಾ. ಶ್ಯಾಮಸುಂದರ ಅವರ ಸಹಾಯದಿಂದ ತಮಗೆ ಉಚಿತವಾಗಿ ಸಿಗುತ್ತಿವೆ. ಪ್ರತಿ ತಿಂಗಳು ಆ ವೈದ್ಯರೇ ಬಸ್ ಚಾರ್ಜ್ ಸಹ ನೀಡಿ ಉಪಕರಿಸುತ್ತಿರುವುದನ್ಮು ವಿವರಿಸಿದ್ದಾಳೆ.

ಈಗ ತನಗೆ ಬಾಡಿಗೆ ಕಾರು ತೆಗೆದುಕೊಂಡು ಬೆಂಗಳೂರಿಗೆ ಹೋಗಿ ಔಷಧಿ ತರುವ ಸಾಮರ್ಥ್ಯವೂ ಇಲ್ಲ ಎಂಬುದನ್ನು ಜಿಲ್ಲಾಧಿಕಾರಿಗಳ ಕಚೇರಿಯ ಸಿಬ್ಬಂದಿಗೆ ಹೇಳಿದ್ದಾಳೆ. ಮಾನವೀಯತೆಯಿಂದ ಈ ಪ್ರಕರಣದಲ್ಲಿ ಸಹಾಯ ಮಾಡಲು ನಿರ್ಧರಿಸಿದ ಸಿಬ್ಬಂದಿ, ಅನಿವಾರ್ಯ ಕಾರಣದಿಂದ ಬೆಂಗಳೂರಿಗೆ ಹೋಗಲು ಪಾಸ್ ಕೇಳಲು ಬಂದ ಜಿಲ್ಲಾ ಖಜಾನೆಯ ಸಿಬ್ಬಂದಿಯೊಬ್ಬರ ಮೂಲಕ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಿಂದ ಔಷಧಿ ತೋರಿಸಿಕೊಟ್ಟಿದ್ದಾರೆ.

ಉಚಿತ ಪರೀಕ್ಷೆ : ಔಷಧಿ ಬಂದ ನಂತರ ಅದನ್ನು ನೇರವಾಗಿ ರೋಗಿಗೆ ಕೊಡುವ ಮೊದಲು ರಕ್ತ ಪರೀಕ್ಷೆಯೊಂದು ಕಡ್ಡಾಯವಾಗಿತ್ತು. ಆಗ ನವನಗರದ ಕ್ಯಾನ್ಸರ್ ಆಸ್ಪತ್ರೆಯ ಡಾ.ಉಮೇಶ ಹಳ್ಳಿಕೇರಿಯವರನ್ನು ಸಂಪರ್ಕಿಸಿದಾಗ ಅವರೂ ಕೂಡ ಉಚಿತವಾಗಿ ಪರೀಕ್ಷೆ ಮಾಡಿ ವರದಿ ನೀಡಿದ್ದಾರೆ. ನಂತರ ಆ ವರದಿಯನ್ನು ಬೆಂಗಳೂರಿನ ತಜ್ಞ ವೈದ್ಯ ಡಾ.ಶಾಮಸುಂದರ್ ಅವರಿಗೆ ವಾಟ್ಸ್‌ಆ್ಯಪ್ ಮೂಲಕ ಕಳುಹಿಸಿ, ಅವರ ಸಲಹೆ ಪಡೆದ ನಂತರ ರೋಗಿಗೆ ಔಷಧಿ ತೆಗೆದುಕೊಳ್ಳಲು ಸಾಧ್ಯವಾಗಿದೆ. ಮೊಮ್ಮಗನ ಚಿಕಿತ್ಸೆಗೆ ನೆರವಾಗಿದ್ದಕ್ಕೆ ಅಜ್ಜಿ ಶಕುಂತಲಾ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದಾಳೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.