ETV Bharat / state

ಮುಕ್ಕಲ್ಲ ಗ್ರಾಮದಲ್ಲಿ ವಾಸ್ತವ್ಯಕ್ಕೆ ಬಂದ ಜಿಲ್ಲಾಧಿಕಾರಿಗೆ ಜನರಿಂದ ಭವ್ಯ ಸ್ವಾಗತ - DC visits mukkalla village

ಕಲಘಟಗಿ ತಾಲೂಕಿನ ಮುಕ್ಕಲ್ಲ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮ ವಾಸ್ತವ್ಯ ಹೂಡಲು ಬಂದಿದ್ದ ಜಿಲ್ಲಾಧಿಕಾರಿ ನಿತೇಶ್ ಕುಮಾರ್ ಪಾಟೀಲ ಅವರನ್ನು ಗ್ರಾಮಸ್ಥರು ಭವ್ಯವಾಗಿ ಸ್ವಾಗತಿಸಿದರು..

dc-nithish-patil-village-visit-program
ಮುಕ್ಕಲ್ಲ ಗ್ರಾಮದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ: ಗ್ರಾಮಸ್ಥರಿಂದ ಭವ್ಯ ಸ್ವಾಗತ.
author img

By

Published : Mar 21, 2022, 3:49 PM IST

Updated : Mar 21, 2022, 5:25 PM IST

ಹುಬ್ಬಳ್ಳಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಕಲಘಟಗಿ ತಾಲೂಕಿನ ಮುಕ್ಕಲ್ಲ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಹೂಡಲು ಆಗಮಿಸಿದ್ದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಗ್ರಾಮಸ್ಥರು ಭವ್ಯ ಸ್ವಾಗತವನ್ನು ಕೋರಿದರು. ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ಆರತಿ ಬೆಳಗಿ ಬರಮಾಡಿಕೊಂಡರು.

ಗ್ರಾ.ಪಂ.ಅಧ್ಯಕ್ಷ ಲಿಂಗರೆಡ್ಡಿ ಚೆನ್ನಪ್ಪ ನಡುವಿನಮನಿ ಜಿಲ್ಲಾಧಿಕಾರಿಗಳಿಗೆ ಮೈಸೂರು ಪೇಟ ತೊಡಿಸಿ, ಬಳಿಕ ಅಲಂಕೃತ ಚಕ್ಕಡಿಯಲ್ಲಿ ಜಿಲ್ಲಾಧಿಕಾರಿಗಳನ್ನು ಹಾಗೂ ಜಿ.ಪಂ. ಸಿಇಓ ಡಾ.ಸುರೇಶ್ ಇಟ್ನಾಳ್ ಅವರನ್ನು ಮೆರವಣಿಗೆ ಗ್ರಾಮದೊಳಗೆ ಬರಮಾಡಿಕೊಳ್ಳಲಾಯಿತು. ಮೆರವಣಿಗೆಯು ವಿವಿಧ ವೇಷಧಾರಿಗಳನ್ನು, ಕಂಸಾಳೆ, ಡೊಳ್ಳು ಕುಣಿತವನ್ನು ಹೊಂದಿತ್ತು . ಲಂಬಾಣಿ ಮಹಿಳೆಯರ ಸಾಂಪ್ರದಾಯಿಕ ಲಂಬಾಣಿ‌ ನೃತ್ಯ ಮೆರವಣಿಗೆಯಲ್ಲಿ ಪ್ರಮುಖ ಆಕರ್ಷಣೆಯಾಗಿತ್ತು.

ಬಳಿಕ ಜಿಲ್ಲಾಧಿಕಾರಿಗಳು ಗ್ರಾಮದ ಅಧಿದೇವತೆ ಮಾರಮ್ಮನಿಗೆ ನಮಸಿ, ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮುಕ್ಕಲ್ಲ ಗ್ರಾಮದಲ್ಲಿ ವಾಸ್ತವ್ಯಕ್ಕೆ ಬಂದ ಜಿಲ್ಲಾಧಿಕಾರಿಗೆ ಜನರಿಂದ ಭವ್ಯ ಸ್ವಾಗತ

ಮಕ್ಕಲ್ಲ ಗ್ರಾ.ಪಂ. ವ್ಯಾಪ್ತಿಯು ಮಕ್ಕಲ್ಲ, ಬಿದರಗಡ್ಡಿ, ಕಾಲ್ಸಾ ಹುಣಸಿಗಟ್ಟಿ ಗ್ರಾಮಗಳನ್ನು ಒಳಗೊಂಡಿದ್ದು, ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಸಂಜೆಯವರೆಗೂ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಗ್ರಾಮದ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪುರುಷೋತ್ತಮ್.ಎನ್.ಆರ್., ಕಲಘಟಗಿ ತಹಶೀಲ್ದಾರ ಯಲ್ಲಪ್ಪ ಗೋಣೆನ್ನವರ್, ತಾ.ಪಂ.ಇಓ ಶಿವಪುತ್ರ ಮಠಮತಿ, ಗ್ರಾ.ಪಂ. ಉಪಾಧ್ಯಕ್ಷ ಶ್ರೀಕಾಂತಗೌಡ ಪಾಟೀಲ್ , ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗರಾಜಕುಮಾರ್ ಎಸ್ ಬಿದರಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ಓದಿ : ಉಕ್ರೇನ್​ನಲ್ಲಿ ರಷ್ಯಾದ ನೌಕಾಪಡೆಯ ಹಿರಿಯ ಕಮಾಂಡರ್ ಸಾವು

Last Updated : Mar 21, 2022, 5:25 PM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.