ಧಾರವಾಡ: ತಾಲೂಕಿನ ಕವಲಗೇರಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡ ಬಳಿಕ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಚಿರತೆ ಕಾಣಿಸಿಕೊಂಡ ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಭೇಟಿ ನೀಡಿ ಕೂಂಬಿಂಗ್ ಕಾರ್ಯಾಚರಣೆ ಪರಿಶೀಲಿಸಿದರು.
ಬಳಿಕ ಮಾತನಾಡಿದ ಡಿಸಿ, 'ನಾಳೆಯಿಂದ ಚಿರತೆ ಪತ್ತೆ ಕಾರ್ಯ ತೀವ್ರಗೊಳಿಸಲಾಗುವುದು, ಗ್ರಾಮಸ್ಥರು ಸಹಕರಿಸಬೇಕು' ಎಂದು ಮನವಿ ಮಾಡಿದರು. ಜೊತೆಗೆ, 'ಜಿಲ್ಲಾಡಳಿತದಿಂದ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರ ಚಿರತೆ ಪತ್ತೆ ಮಾಡಲಾಗುವುದು' ಎಂದು ಭರವಸೆ ನೀಡಿದರು.
ಉಪವಿಭಾಗಾಧಿಕಾರಿ ಡಾ.ಗೋಪಾಲಕೃಷ್ಣ ಬಿ., ಐಎಎಸ್ ಪ್ರೊಬೇಷನರಿ ಅಧಿಕಾರಿ ಮಾಧವ ಗಿತ್ತೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ, ತಹಶೀಲ್ದಾರ್ ಡಾ.ಸಂತೋಷ ಬಿರಾದರ, ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು.
ಹುಬ್ಬಳ್ಳಿಯ ಕೇಂದ್ರೀಯ ವಿದ್ಯಾಲಯದ ಹಳೆ ಕಟ್ಟಡದ ಬಳಿ ಕಾಣಿಸಿಕೊಂಡಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ತೀವ್ರಗೊಂಡಿದೆ. ಕಳೆದೊಂದು ವಾರದಿಂದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಬೀಡುಬಿಟ್ಟಿದ್ದು, ಹಲವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ: ಧಾರವಾಡ: ಕವಲಗೇರಿ ಗ್ರಾಮದಲ್ಲಿ ಚಿರತೆ ಸೆರೆಗೆ ಕೂಂಬಿಂಗ್