ETV Bharat / state

ಡಿ.ಕೆ.ಶಿವಕುಮಾರ್ ಸಿಬಿಐ ತನಿಖೆ ವಾಪಸ್: 'ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ'- ಪ್ರಹ್ಲಾದ್ ‌ಜೋಶಿ

D.K.Sivakumar's CBI case issue: ಡಿಸಿಎಂ ಡಿ.ಕೆ. ಶಿವಕುಮಾರ್ ಸಿಬಿಐ ತನಿಖೆ ವಾಪಸ್ ಪಡೆಯುವ ವಿಚಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ಪ್ರತಿಕ್ರಿಯಿಸಿ, ''ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ'' ಎಂದು ಕಿಡಿಕಾರಿದರು.

Prahlad Joshi
ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ
author img

By ETV Bharat Karnataka Team

Published : Nov 24, 2023, 2:35 PM IST

ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ಪ್ರತಿಕ್ರಿಯೆ

ಹುಬ್ಬಳ್ಳಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಿಬಿಐ ತನಿಖೆ ವಾಪಸ್ ಪಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ಅವರು ಪ್ರತಿಕ್ರಿಯೆ ನೀಡಿದರು. ''ಇದು ನೈತಿಕವಾಗಿ ಹಾಗೂ ಕಾನೂನಾತ್ಮಕವಾಗಿ ಸರಿಯಲ್ಲ. ದೇಶದಲ್ಲಿ ನಾಯಾಂಗ ವ್ಯವಸ್ಥೆ ಇದೆ. ಸರ್ಕಾರದ ನಿರ್ಣಯಗಳ ವಿರುದ್ಧವಾಗಿಯೂ ನ್ಯಾಯಾಲಯಗಳು ತೀರ್ಪು ನೀಡಿವೆ. ನ್ಯಾಯಾಂಗ ವ್ಯವಸ್ಥೆ ಸಂಪೂರ್ಣವಾಗಿ ಸ್ವತಂತ್ರವಾಗಿವೆ. ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ'' ಎಂದು ಹೇಳಿದರು.

ನಗರದಲ್ಲಿ ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ‌ಮಾತನಾಡಿದ ಅವರು, ''ದೋಷಾರೋಪ ಪಟ್ಟಿ ಸಲ್ಲಿಸುವ ಹಂತದಲ್ಲಿ ಪ್ರಕರಣ ವಾಪಸ್ ಪಡೆದಿರುವುದು ಸರಿಯಲ್ಲ. ಸಂಬಂಧಿಸಿದ ತನಿಖಾ ಸಂಸ್ಥೆಗಳ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಸಚಿವ ಸಂಪುಟದ‌ ಈ‌ ನಿರ್ಧಾರವನ್ನು ನ್ಯಾಯಾಲಯ ತಿರಸ್ಕರಿಸಲಿದೆ ಎನ್ನುವ ವಿಶ್ವಾಸವಿದೆ'' ಎಂದರು.

ಡಿಕೆಶಿ ವಿರುದ್ಧ ಸೂಕ್ತ ರೀತಿಯಲ್ಲಿ ತನಿಖೆ ನಡೆಯುತ್ತೆ- ಜೋಶಿ: ಡಿ.ಕೆ. ಶಿವಕುಮಾರ ವಿರುದ್ಧ ಸೂಕ್ತ ರೀತಿಯಲ್ಲಿ ತನಿಖೆ ನಡೆಯುತ್ತೆ. ಈಗಾಗಲೇ ರಾಜ್ಯ ಸರ್ಕಾರ ಅನುಮತಿ ಕೊಟ್ಟಿದೆ. ದೋಷಾರೋಪ ಪಟ್ಟಿ ಸಲ್ಲಿಕೆಯ ಹಂತದಲ್ಲಿರುವುದರಿಂದ ಟೆಕ್ನಿಕಲ್ ಗ್ರೌಂಡ್ಸ್ ಮೇಲೆ ಹೋಗೋದಿಲ್ಲ. ಒಂದು ವೇಳೆ ಅದು ತಪ್ಪಾಗಿದ್ದರೆ ನ್ಯಾಯಾಲಯಕ್ಕೆ ಹೋಗಲಿ. ಆದ್ರೆ, ರಾಜಕೀಯ ಅಧಿಕಾರ ನಡೆಸೋದು ಸರಿಯಲ್ಲ. ಯಾವ ಸಂಪುಟದಲ್ಲಿ ಡಿಕೆಶಿ ಡಿಸಿಎಂ ಇದ್ದಾರಲ್ವಾ, ಅದೇ ಸಂಪುಟದಿಂದ ಅವರನ್ನು ನಾಮಕೆವಾಸ್ತೆ ಒಂದು‌ ದಿನ‌ ಹೊರಗೆ ಇಟ್ಟು ಶಿಫಾರಸ್ಸು ವಾಪಸ್ ಪಡೆಯುವುದರ ಅರ್ಥವೇನು?. ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ ಅನ್ನೋದು ಸ್ಪಷ್ಟವಾಗುತ್ತದೆ'' ಎಂದು ತೀವ್ರ ಆಕ್ರೋಶವ್ಯಕ್ತಪಡಿಸಿದರು.

''ಜಾತಿ‌ ಜನಗಣತಿ ವರದಿ ಬಹಿರಂಗಪಡಿಸುವ ಬಗ್ಗೆ ಕಾಂಗ್ರೆಸ್ ಸರ್ಕಾರದಲ್ಲೇ ಗೊಂದಲವಿದೆ. ಜಾತಿ ಜನಗಣತಿ ವಿಚಾರದಲ್ಲಿ ದೊಡ್ಡ ಪ್ರಮಾಣದ ಗೊಂದಲ‌ ಸೃಷ್ಟಿಯಾಗುತ್ತಿದೆ. ಇದು ಆಡಳಿತ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತೆ. ಜಾತಿ ಜನಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವೇ ಇಲ್ಲ. ಜಾತಿ ಜನಗಣತಿ ಮಾಡಬೇಕಿರುವುದು ಕೇಂದ್ರ ಸರ್ಕಾರ. ಕೇಂದ್ರ ಸರ್ಕಾರದ ಕೆಲಸವನ್ನು ನಾವು ಮಾಡುತ್ತೇವೆ ಅಂತಾ ರಾಜ್ಯ ಸರ್ಕಾರ ಹೇಳುತ್ತಿದೆ. ಜಾತಿ ಜನಗಣತಿ ವರದಿಯ ಪತ್ರ ಮಾಯವಾಗಿದೆ ಎಂದು ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರೇ ಪತ್ರ ಬರೆದಿದ್ದಾರೆ. ಈ ವಿಚಾರದ ಬಗ್ಗೆ ಸರ್ಕಾರದಲ್ಲೇ ಸಹಮತವಿಲ್ಲ. ಡಿ.ಕೆ. ಶಿವಕುಮಾರ, ಶಾಮನೂರು ಶಿವಶಂಕರಪ್ಪ ಮೊದಲಾದವರಿಂದ ವಿರೋಧವಿದೆ.‌ ಈ ಕುರಿತು ವರದಿ ಜಾರಿಯಾಗಬಾರದೆಂಬ ವಿರೋಧ ಅವರಲ್ಲೇ ಇದೆ.‌ ಸರ್ಕಾರದಲ್ಲಿ ಗೊಂದಲ, ಭಿನ್ನಾಭಿಪ್ರಾಯ ಇರುವಾಗ ವರದಿ ಹೇಗೆ ಸಲ್ಲಿಸುತ್ತಾರೆ'' ಎಂದು ಪ್ರಶ್ನಿಸಿದರು.

ಸರ್ಕಾರದ ಆಡಳಿತ ಸಂಪೂರ್ಣ ಕುಸಿತ- ಜೋಶಿ ಆರೋಪ: ಕೆಲ‌ ಶಾಸಕರನ್ನು ಎತ್ತಿಕಟ್ಟಿ ಸಿಎಂ ಸಿದ್ದರಾಮಯ್ಯ ತಮ್ಮ ಪಾರುಪತ್ಯ ಮೆರೆಯುತ್ತಿದ್ದಾರೆ. ಜನರ ಹಿತದೃಷ್ಟಿಯಿಂದ ಸರ್ಕಾರ ಸರಿಯಾಗಿ‌ ನಡೆಸಬೇಕು. ಆದ್ರೆ ಸಿದ್ಧರಾಮಯ್ಯ 20 ಶಾಸಕರನ್ನು ಮೈಸೂರಿಗೆ ಕಳಿಸುವ ಪ್ರಯತ್ನ ಮಾಡಿದ್ರು.‌ ಸದ್ಯ ಹಲವು ಶಾಸಕರು ವಿದೇಶ ಪ್ರವಾಸದಲ್ಲಿದ್ದಾರೆ. ಜನ ಐದು ವರ್ಷ ಅಧಿಕಾರ ನೀಡಿದ್ದು, ಗೊಂದಲಗಳಿಲ್ಲದೇ ಕೆಲಸ ಮಾಡಲು ಜನತಾ ದರ್ಶನ, ಜನಸಂಪರ್ಕ ಕಾರ್ಯಕ್ರಮಗಳು ನಿಂತು ಹೋಗಿವೆ. ಬಹಳಷ್ಟು ಭಾಗದಲ್ಲಿ ಸಚಿವರು ತಮ್ಮ ಕ್ಷೇತ್ರಗಳಿಗೆ ಸೀಮಿತವಾಗಿದ್ದಾರೆ. ರಾಜ್ಯದಲ್ಲಿ ಸರ್ಕಾರದ ಆಡಳಿತ ಯಂತ್ರ ಸಂಪೂರ್ಣ ಕುಸಿತ ಕಂಡಿದೆ. ಸರ್ಕಾರ ಈ‌ ನೂನ್ಯತೆಗಳನ್ನು ಸರಿಪಡಿಸಬೇಕು'' ಎಂದು‌ ಒತ್ತಾಯಿಸಿದರು.

ಪ್ರಧಾನಿ ಮೋದಿಯವರನ್ನು ಅಪಶಕುನ ಎಂಬ ರಾಹುಲ್ ಗಾಂಧಿ ಟೀಕೆ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ‌ನೀಡಿದ ಅವರು, ''ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡದಿರೋದೇ ಉತ್ತಮ. ಅವರು ಯಾವ ಕೀಳು ಮಟ್ಟಕ್ಕೆ ಇಳಿಯುತ್ತಾರೆ ಅನ್ನೋದಕ್ಕೆ ಈ‌ ಹೇಳಿಕೆಯೇ ಸಾಕ್ಷಿ. ರಾಹುಲ್ ಗಾಂಧಿಗೆ ಹೊಸ ವಿಷಯ ಬರೆದುಕೊಡುವವರೆಗೂ ಅವರು ಏನೇನೋ ಮಾತನಾಡುತ್ತಾರೆ. ದೇಶದಲ್ಲಷ್ಟೇ ಅಲ್ದೇ ಇಡೀ ವಿಶ್ವದಲ್ಲಿ‌ ಪ್ರಧಾನಿ ಮೋದಿ ಬಗ್ಗೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಮೋದಿ ವಿರುದ್ಧ ಹೇಳಿಕೆ ನೀಡಿದಷ್ಟು, ಮೋದಿಯವರ ಮೇಲೆ ಜನಾಶೀರ್ವಾದ ಹೆಚ್ಚಾಗುತ್ತದೆ'' ಎಂದು ಗರಂ ಆದರು.

ಇದನ್ನೂ ಓದಿ: ರಾಹುಲ್ ಗಾಂಧಿ ಹೋರಾಟಗಾರ, ಚು.ಆಯೋಗದ ನೋಟಿಸ್‌ಗೆ ಗೌರವಯುತವಾಗಿ ಉತ್ತರಿಸುತ್ತಾರೆ: ಸುಪ್ರಿಯಾ ಸುಳೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.