ಧಾರವಾಡ: ಕಾಂಗ್ರೆಸ್ನವರ ಮೇಲೆ ಜೆಡಿಎಸ್ನವರಿಗೆ ನಂಬಿಕೆ ಇಲ್ಲ. ಜೆಡಿಎಸ್ಗೆ ಕೆಟ್ಟ ಮೇಲೆ ಬುದ್ಧಿ ಬಂದಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಪ್ರಶ್ನಾತೀತ ನಾಯಕರ ಅವಧಿ ಮುಗಿಯುವವರೆಗೆ ಅವರೇ ಸಿಎಂ ಆಗಿರ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಎರಡು ವರ್ಷದಲ್ಲಿ ಸಾಕಷ್ಟು ರಸ್ತೆಗಳು ಹಾಳಾಗಿದ್ದು, ಕಳೆದ ವರ್ಷ 7 ಸಾವಿರ ಕೋಟಿಯಷ್ಟು ಹಾನಿಯಾಗಿದೆ. ಈ ವರ್ಷ 3,500 ಕೋಟಿ ರೂ.ನಷ್ಟು ಹಾನಿಯಾಗಿದೆ ಎಂದು ಹೇಳಿದರು.
ಓದಿ: ಕರಾವಳಿ ಮತ್ತು ಮೀನುಗಾರರ ರಕ್ಷಣೆಗೆ ನೂತನ 'ಕಡಲು' ಆ್ಯಪ್
2019-20ರಲ್ಲಿ 35 ಸಾವಿರ ಕೋಟಿ ರೂ. ಹಾನಿಯಾಗಿದೆ. 2020-21ರಲ್ಲಿ 25 ಸಾವಿರ ಕೋಟಿ ರೂ. ಹಾನಿಯಾಗಿದೆ. ಬಿಜೆಪಿ ಸರ್ಕಾರ ಬಂದ ಮೇಲೆ ಎರಡು ವರ್ಷದಲ್ಲಿ 60 ಸಾವಿರ ಕೋಟಿ ರೂ. ಹಾನಿಯಾಗಿದೆ. 7,348 ಕಿಲೋ ಮೀಟರ್ ರಸ್ತೆ ಹಾನಿಯಾಗಿದೆ. ಶೇ. 70ರಷ್ಟು ರಸ್ತೆ ರಿಪೇರಿ ನಡೆದಿದೆ ಎಂದರು.
ಇನ್ನು ಇಲಾಖೆಯಲ್ಲಿ ಇಂಜಿನಿಯರ್ಗಳ ಕೊರತೆ ವಿಚಾರದ ಬಗ್ಗೆ ಮಾತನಾಡಿದ ಅವರು, ನೇಮಕಾತಿಯಲ್ಲಿ ವಿಳಂಬವಾಗಿರುವ ಹಿನ್ನೆಲೆ ಹೊರಗುತ್ತಿಗೆ ಆಧಾರದ ಮೇಲೆ ಇಂಜಿನಿಯರ್ಗಳನ್ನು ತೆಗೆದುಕೊಳ್ಳಬೇಕು. ರಾಜ್ಯದಲ್ಲಿ 990 ಇಂಜಿನಿಯರ್ಗಳನ್ನು ಹೊರಗುತ್ತಿಗೆ ತೆಗೆದುಕೊಳ್ಳಲು ಆಧಿಕಾರಿಗಳಿಗೆ ಡಿಸಿಎಂ ಕಾರಜೋಳ ಸೂಚಿಸಿದರು.