ETV Bharat / state

ಹುಬ್ಬಳ್ಳಿಯ ಕಸಬಾಪೇಟೆ ಠಾಣೆ ಎದುರು ಶವವಿಟ್ಟು ಪ್ರತಿಭಟನೆ ಪ್ರಕರಣ: ಇನ್ಸ್ ಪೆಕ್ಟರ್ ಎತ್ತಂಗಡಿ - Transfer of Inspector

ಹಳೇ ಹುಬ್ಬಳ್ಳಿಯ ಜಂಗ್ಲಿಪೇಟೆ ನಿವಾಸಿ ಸಂತೋಷ ಮುರುಗೋಡ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಪೊಲೀಸರ ಕೈವಾಡ ಇದೆ ಎಂದು ಆರೋಪಿಸಿ ಕಸಬಾಪೇಟೆ ಪೊಲೀಸ್ ಠಾಣೆ ಮುಂದೆ ಭಾನುವಾರ ಶವ ಇಟ್ಟು ಪ್ರತಿಭಟನೆ ಮಾಡಿದ್ದರು.

Dead bodies protest in front of Kasabapet police station
ಕಸಬಾಪೇಟೆ ಠಾಣೆ ಎದುರು ಶವವಿಟ್ಟು ಪ್ರತಿಭಟನೆ
author img

By

Published : Nov 15, 2022, 3:00 PM IST

Updated : Nov 15, 2022, 5:10 PM IST

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಜಂಗ್ಲಿಪೇಟೆ ನಿವಾಸಿ ಸಂತೋಷ ಮುರುಗೋಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್​ಪೆಕ್ಟರ್ ಎತ್ತಂಗಡಿ ಆಗಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರ ಕೈವಾಡ ಇದೆ ಎಂದು ಆರೋಪಿಸಿ ಕಸಬಾಪೇಟೆ ಪೊಲೀಸ್ ಠಾಣೆ ಮುಂದೆ ಭಾನುವಾರ ಮೃತನ ಸಂಬಂಧಿಕರು ಶವ ಇಟ್ಟು ಪ್ರತಿಭಟನೆ ಮಾಡಿದ್ದರು.

ಹುಬ್ಬಳ್ಳಿಯ ಕಸಬಾಪೇಟೆ ಠಾಣೆ ಎದುರು ಶವವಿಟ್ಟು ಪ್ರತಿಭಟನೆ

ಹಳೆ ಹುಬ್ಬಳ್ಳಿಯಲ್ಲಿ ಸಂತೋಷ ಮುರುಗೋಡನನ್ನು ಶುಕ್ರವಾರ ರಾತ್ರಿ ಹಳೇ ವೈಷಮ್ಯದ ಹಿನ್ನೆಲೆ ಶಿವಾನಂದ ನಾಯಕ ಎಂಬಾತನು ಚಾಕು ಇರಿದು ಕೊಲೆ ಮಾಡಿದ್ದ. ಕೊಲೆ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ಪೊಲೀಸ್ ಠಾಣೆ ಮುಂದೆ ಜಂಗ್ಲೀಪೇಟೆ ನಿವಾಸಿಗಳು ಹಾಗೂ ಸಂತೋಷ ಕುಟುಂಬಸ್ಥರು ಮೃತದೇಹವನ್ನು ಕಸಬಾ ಪೊಲೀಸ್ ಠಾಣೆಗೆ ತಂದು ಪ್ರತಿಭಟನೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಶಿವಾನಂದ ನಾಯ್ಕಗೆ ಪೊಲೀಸರ ಬೆಂಬಲ ಇದೆ ಎಂದು ಸಹ ಆರೋಪಿಸಿದ್ದರು.

ಈ ವೇಳೆ ಕಸಬಾಪೇಟೆ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸೆಕ್ಟರ್ ಅಡೆಪ್ಪ ಬನ್ನಿ ಅವರನ್ನು ಹುಬ್ಬಳ್ಳಿ ಧಾರವಾಡ ಸಿಸಿಬಿಗೆ ವರ್ಗಾವಣೆ ಮಾಡಿ, ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಆರ್ ಎಚ್ ಹಳ್ಳೂರು ಅವರನ್ನು ಕಸಬಾಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲು ಪೊಲೀಸ್ ಆಯುಕ್ತ ಲಾಬೂರಾಮ್ ಆದೇಶ ಹೊರಡಿಸಿದ್ದರು.

ಇದನ್ನೂ ಓದಿ: ನಿವೃತ್ತ ಐಬಿ ಅಧಿಕಾರಿ ಕೊಲೆ ಪ್ರಕರಣದಲ್ಲಿ ಇಬ್ಬರ ಬಂಧನ: ಆರಗ ಜ್ಞಾನೇಂದ್ರ

Last Updated : Nov 15, 2022, 5:10 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.