ಧಾರವಾಡ: ಕೊರೊನಾ ವೈರಸ್ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆ ಕರ್ನಾಟಕ ವಿಶ್ವವಿದ್ಯಾಲಯ ಸಿಬ್ಬಂದಿಗೆ ರಜೆ ಘೋಷಿಸಿದೆ.
ಕರ್ನಾಟಕ ವಿಶ್ವವಿದ್ಯಾಲಯ ಜುಲೈ 8ರಿಂದ ಜುಲೈ 15ರವರೆಗೆ ವಿವಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶೈಕ್ಷಣಿಕ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿದೆ. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳು, ಕಚೇರಿಗಳ ಮುಖ್ಯಸ್ಥರು ಹಾಗೂ ಅಧಿಕಾರಿಗಳು ಸೂಚಿಸುವ ಕರ್ತವ್ಯದ ಅವಶ್ಯಕತೆಗೆ ಅನುಗುಣವಾಗಿ ಬೋಧಕೇತರ, ಹೊರ ಗುತ್ತಿಗೆ ಸಿಬ್ಬಂದಿ ಹಾಜರಾಗಬೇಕು ಎಂದು ತಿಳಿಸಿದೆ.
ಕರ್ನಾಟಕ ವಿಶ್ವವಿದ್ಯಾಲಯ ಬೋಧಕೇತರ ಹಾಗೂ ಹೊರ ಗುತ್ತಿಗೆ ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿರಬೇಕು. ತುರ್ತು ಬಾಕಿ ಕಚೇರಿ ಕೆಲಸಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗುವುದು. ಸರ್ಕಾರಕ್ಕೆ ಹಾಗೂ ಕವಿವಿಗೆ ಅಗತ್ಯವಿದ್ದಾಗ ಕಡ್ಡಾಯವಾಗಿ ಸೇವೆಗೆ ಹಾಜರಾಗಬೇಕು ಎಂದು ಸೂಚಿಸಿದೆ.