ETV Bharat / state

ಧಾರವಾಡ: ಸಾಲಗಾರರಿಗೆ ಕರೆ ಮಾಡಿ ಒತ್ತಡ ಹಾಕದಂತೆ ಬ್ಯಾಂಕ್ ಗಳಿಗೆ ದೀಪಾ ಚೋಳನ್ ಸೂಚನೆ - ರಾಷ್ಟ್ರೀಕೃತ, ವಾಣಿಜ್ಯ ಹಾಗೂ ಕಿರು ಹಣಕಾಸು ಸೇವಾ ಸಂಸ್ಥೆಗಳ ಸುದ್ದಿ

ಯಾವುದೇ ರೀತಿಯ ಹಣಕಾಸು ಸಂಸ್ಥೆ, ಬ್ಯಾಂಕರ್ಸ್ ಗಳು ತಮ್ಮಲ್ಲಿ ಸಾಲ ಪಡೆದ ಗ್ರಾಹಕರಿಗೆ ದೂರವಾಣಿ ಕರೆ ಮಾಡಿ ಅಥವಾ ನೋಟಿಸ್ ನೀಡುವ ಮೂಲಕ ವಸೂಲಿಗೆ ಒತ್ತಡ ಹಾಕಿದರೆ ಸರ್ಕಾರದ ನಿರ್ದೇಶನದಂತೆ ಸೂಕ್ತ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ದೀಪಾ ಚೋಳನ್ ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

Deepa
Deepa
author img

By

Published : May 31, 2020, 2:32 PM IST

ಧಾರವಾಡ: ಹಣಕಾಸು ಸಂಸ್ಥೆ, ಬ್ಯಾಂಕರ್ಸ್ ಗಳು ತಮ್ಮಲ್ಲಿ ಸಾಲ ಪಡೆದ ಗ್ರಾಹಕರಿಗೆ ದೂರವಾಣಿ ಕರೆ ಮಾಡಿ ಅಥವಾ ನೋಟಿಸ್ ನೀಡಿ ಹಣ ಪಾವತಿ ಮಾಡುವಂತೆ ಒತ್ತಡ ಹಾಕಿದರೆ ಸರ್ಕಾರದ ನಿರ್ದೇಶನದಂತೆ ಸೂಕ್ತ ಕ್ರಮ ಜರುಗಿಸುವುದುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟ್ರೀಕೃತ, ವಾಣಿಜ್ಯ ಹಾಗೂ ಕಿರು ಹಣಕಾಸು ಸೇವಾ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಿ ಮಾತನಾಡಿದ ಅವರು, ಬರುವ ಆಗಸ್ಟ್-2020 ರ ವರೆಗೆ ಯಾವುದೇ ರೀತಿಯ ಸಾಲಗಾರರಿಂದ ಇಎಂಐ ತುಂಬಲು ಒತ್ತಾಯಿಸುವುದು ಅಥವಾ ಆಮಿಷಗಳನ್ನು ಒಡ್ಡುವ ಮೂಲಕ ಒತ್ತಡ, ಮಾನಸಿಕ ಕಿರಿಕಿರಿ ಉಂಟು ಮಾಡಿದ ಬಗ್ಗೆ ದೂರುಗಳು ಬಂದಲ್ಲಿ ಜಿಲ್ಲಾಡಳಿತ ಅದನ್ನು ಗಂಭೀರವಾಗಿ ಪರಿಗಣಿಸಲಿದೆ ಎಂದರು.

ಕೊರೊನಾದಂತಹ ವಿಷಮ ಪರಿಸ್ಥಿತಿಯಲ್ಲಿ ಎಲ್ಲಾ ರೀತಿಯ ಆರ್ಥಿಕ ಹಾಗೂ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿವೆ. ಸರ್ಕಾರ ಅಸಹಾಯಕರ ನೆರವಿಗಾಗಿ ಹಲವಾರು ಯೋಜನೆ, ಪ್ರೋತ್ಸಾಹದಾಯಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಸಾಲಗಾರರಿಗೆ ಕರೆ ಮಾಡಿ ಇಎಂಐ ಕಂತು ತುಂಬಲು, ಹಣ ವಸೂಲಿಗೆ ನೋಟಿಸ್ ನೀಡುವುದು ಸೂಕ್ತವಲ್ಲ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.

ಹಲವಾರು ಗ್ರಾಹಕರು ಲೀಡ್‍ಬ್ಯಾಂಕ್‍ಗೆ ಈ ಕುರಿತು ದೂರುಗಳನ್ನು ನೀಡುತ್ತಿದ್ದಾರೆ. ಲೀಡ್‍ಬ್ಯಾಂಕ್ ಮೂಲಕ ಅಗತ್ಯ ಮಾಹಿತಿಯನ್ನು ಎಲ್ಲಾ ಬ್ಯಾಂಕ್, ಬ್ಯಾಂಕ್ ಶಾಖೆಗಳಿಗೆ ಈಗಾಗಲೇ ತಲುಪಿಸಲಾಗಿದೆ. ಇದರ ಹೊರತಾಗಿಯೂ ಇನ್ನೂ ಮುಂದೆ ಗ್ರಾಹಕರಿಂದ ಒತ್ತಾಯದ ವಸೂಲಾತಿ ಕುರಿತು ದೂರು ಬಂದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಸಭೆಯಲ್ಲಿ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.

ಇಎಂಐ ಕಂತುಗಳ ಮುಂದೂಡಿಕೆಯ ಬಗ್ಗೆ ಮತ್ತು ಒತ್ತಾಯದಿಂದ ಸಾಲ ವಸೂಲಿ ಮಾಡದಂತೆ ಬ್ಯಾಂಕ್ ಮತ್ತು ಬ್ಯಾಂಕ್ ಶಾಖೆಗಳ ಮುಖ್ಯಸ್ಥರಿಗೆ ಸರ್ಕಾರ, ಆರ್.ಬಿ.ಐ. ನೀಡಿರುವ ಸುತ್ತೋಲೆಗಳ ಪೂರ್ಣ ಮಾಹಿತಿ, ತಿಳುವಳಿಕೆ ನೀಡಲು ಲೀಡ್‍ಬ್ಯಾಂಕ್ ಮ್ಯಾನೇಜರ್ ಅವರಿಗೆ ಜಿಲ್ಲಾಧಿಕಾರಿಗಳು ನಿರ್ದೆಶನ ನೀಡಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ. ಸತೀಶ್, ಲೀಡ್‍ಬ್ಯಾಂಕ್ ಮ್ಯಾನೇಜರ್ ಈಶ್ವರನಾಥ ಮಾತನಾಡಿದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಮಹಮ್ಮದ್ ಜುಬೇರ, ಕರ್ನಾಟಕ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ನಾಗರಾಜ ಐತಾಳ, ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಮಂಜುನಾಥ ಕೆ., ಬ್ಯಾಂಕ್ ಆಪ್ ಬರೊಡಾ ಧಾರವಾಡ ಶಾಖೆಯ ಪ್ರಧಾನ ವ್ಯವಸ್ಥಾಪಕ ಬಸವರಾಜ ಬೆಲ್ಲದ, ನಬಾರ್ಡ್ ಸಂಸ್ಥೆ ಜಿಲ್ಲಾ ಉಪ ವ್ಯವಸ್ಥಾಪಕಿ ಶೀಲಾ ಭಂಡಾರಕರ, ಕಿರುಹಣಕಾಸು ಸೇವಾ ಸಂಸ್ಥೆ ಅಧ್ಯಕ್ಷ ರಾಘವೆಂದ್ರ, ಸೇರಿದಂತೆ ವಿವಿಧ ಬ್ಯಾಂಕ್‍ಗಳ ಪ್ರತಿನಿಧಿಗಳು, ಕಿರುಹಣಕಾಸು ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.