ಧಾರವಾಡ: ನಗರದಲ್ಲಿ ವ್ಯಕ್ತಿಯೋರ್ವನಿಗೆ ಕೊರೊನಾ ವೈರಸ್ ಇದೆ ಎಂದು ಸೋಶಿಯಲ್ ಮೀಡಿಯಾಗಳಲ್ಲಿ ವದಂತಿ ಹಬ್ಬಿಸಲಾಗುತ್ತಿದೆ. ಈ ರೀತಿಯ ವದಂತಿಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ದೀಪಾ ಚೋಳನ್ ಗರಂ ಆಗಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧಾರವಾಡದಲ್ಲಿ ಯಾರಿಗೂ ಕೊರೋನಾ ಬಂದಿಲ್ಲ. ಮೂವರ ರಕ್ತ ಮತ್ತು ಗಂಟಲು ದ್ರವದ ಮಾದರಿಯನ್ನು ಶಿವಮೊಗ್ಗಕ್ಕೆ ಕಳುಹಿಸಿದ್ದೇವೆ. ಶಿವಮೊಗ್ಗದ ಲ್ಯಾಬ್‌ನಿಂದ ಬರುವ ವರದಿಗಾಗಿ ಕಾಯುತ್ತಿದ್ದೇವೆ. ವರದಿ ಬಂದ ತಕ್ಷಣ ನಾವೇ ಹೇಳುತ್ತೇವೆ. ಅಲ್ಲಿಯವರೆಗೂ ಯಾರೂ ಕೂಡ ಸುಳ್ಳು ಮಾಹಿತಿಯನ್ನು ಹರಿಬಿಡಬೇಡಿ ಎಂದು ಹೇಳಿದ್ದಾರೆ.
ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ವ್ಯಕ್ತಿಯೊಬ್ಬನ ಫೋಟೋ ಹಾಕಿ ಕೊರೊನಾ ಬಂದಿದೆ ಅಂತಾ ಹಾಕುತ್ತಿದ್ದಾರೆ. ಇದೊಂದು ಸುಳ್ಳು ಸುದ್ದಿಯಾಗಿದ್ದು, ಜನ ಭಯಭೀತರಾಗುವುದು ಬೇಡ. ನಿನ್ನೆಯಿಂದ ಎರಡು ಸುಳ್ಳು ಸುದ್ದಿಗಳು ಹಬ್ಬಿವೆ. ರಾತ್ರಿ ಹೊತ್ತು ಔಷಧಿ ಸಿಂಪಡಿದ್ತೀವಿ ಅಂತಾನೂ ಸೊಶೀಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಈ ರೀತಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈ ಸಂಬಂಧ ಕಾನೂನು ಕ್ರಮಕ್ಕೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದೇನೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ರು.