ಹುಬ್ಬಳ್ಳಿ: ಗ್ರಾಮ ಪಂಚಾಯಿತಿ ಸದಸ್ಯ ದೀಪಕ್ ಪಟದಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ಚುರುಕುಗೊಳಿಸಿದ್ದು, ಇಂದು ದೀಪಕ್ ಸಹೋದರನನ್ನು ವಿಚಾರಣೆಗೆ ಕರೆದಿರುವ ಅಧಿಕಾರಿಗಳು ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ: ಪಟದಾರಿ ಮರ್ಡರ್ ಕೇಸ್ ತನಿಖೆ ಚುರುಕು: ಹುಬ್ಬಳ್ಳಿಗೆ ಆಗಮಿಸಿದ ಸಿಐಡಿ ತಂಡ
ನಿನ್ನೆ ಹುಬ್ಬಳ್ಳಿಗೆ ಆಗಮಿಸಿರುವ ಸಿಐಡಿ ಅಧಿಕಾರಿಗಳ ತಂಡ. ಇಂದು ದೀಪಕ್ ಸಹೋದರ ಸಂಜಯ್ ಪಟದಾರಿಯನ್ನು ವಿಚಾರಣೆಗೆ ಕರೆದಿದ್ದಾರೆ. ಜುಲೈ 4 ರಂದು ಗ್ರಾಪಂ ಸದಸ್ಯ ದೀಪಕ್ ಪಟದಾರಿಯನ್ನು ಹುಬ್ಬಳ್ಳಿ ತಾಲೂಕಿನ ರಾಯನಾಳ ಬಳಿ ಕೊಲೆ ಮಾಡಲಾಗಿತ್ತು. ಕಳೆದ ಮೂರು ದಿನಗಳ ಹಿಂದೆ ದೀಪಕ್ ಕೊಲೆ ಕೇಸ್ ಸಿಐಡಿಗೆ ವರ್ಗಾವಣೆಗೊಂಡಿದ್ದು, ಈ ನಿಟ್ಟಿನಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
ಇದನ್ನೂ ಓದಿ: ದೀಪಕ ಪಟದಾರಿ ಕೊಲೆ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ
ಹುಬ್ಬಳ್ಳಿಗೆ ಆಗಮಿಸಿರುವ ಆರು ಜನ ಸಿಐಡಿ ಅಧಿಕಾರಿಗಳ ತಂಡ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಮಾಹಿತಿ ಸಂಗ್ರಹ ಮಾಡಿದ್ದು, ಕೊಲೆಯಾದ ಸ್ಥಳಕ್ಕೂ ತೆರಳಿ ಪರಿಶೀಲನೆ ನಡೆಸಿದೆ.