ಹುಬ್ಬಳ್ಳಿ: ನೈರುತ್ಯ ರೈಲ್ವೆ ವಲಯದಿಂದ ಆಯೋಜಿಸಲಾಗಿದ್ದ ಸ್ವಚ್ಛತಾ ಪಖ್ವಾರ ಕಾರ್ಯಕ್ರಮಕ್ಕೆ ನೈರುತ್ಯ ರೈಲ್ವೆ ವಲಯದ ವ್ಯವಸ್ಥಾಪಕ ನಿರ್ದೇಶಕ ಅಜಯಕುಮಾರ್ ಸಿಂಗ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತವಾಗಿ ಸೆ.16ರಿಂದ ಸ್ವಚ್ಚತಾ ಪಖ್ವಾರ ಅಭಿಯಾನ ಆಯೋಜಿಸಲಾಗುತ್ತದೆ. ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.
ರೈಲ್ವೆ ವಲಯದ ಪ್ರತಿಯೊಬ್ಬ ಸಿಬ್ಬಂದಿ ಕೂಡ ಸ್ವಚ್ಚತಾ ಪಖ್ವಾರ ಅಭಿಯಾನಕ್ಕೆ ಕೈ ಜೋಡಿಸಿ ಮಹಾತ್ಮ ಗಾಂಧೀಜಿಯವರ ಕನಸು ನನಸು ಮಾಡಲು ಶ್ರಮಿಸಿಬೇಕಿದೆ ಎಂದರು.