ETV Bharat / state

ಮದ್ವೆಗೆ ಹೋಗ್ಬೇಕಂದ್ರೇ ನಿಮಗೆ ಈ ಕೈ ಬ್ಯಾಂಡ್ ಇರಲೇಬೇಕು.. ಡಿಸಿ ಸಾಹೇಬ್ರು ಹೊಸ ಐಡ್ಯಾ ಮಾಡ್ಯಾರ್..

ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಪ್ರತಿ ಹಂತದಲ್ಲೂ ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಡಳಿತ ವಿವಿಧ ರೀತಿಯ ಜನಜಾಗೃತಿ ಕ್ರಮಗಳನ್ನು ಕೈಗೊಳ್ಳುತ್ತಿದೆ..

ಬ್ಯಾಂಡ್
ಬ್ಯಾಂಡ್
author img

By

Published : Apr 23, 2021, 5:34 PM IST

ಧಾರವಾಡ : ರಾಜ್ಯ ಸರ್ಕಾರ ಏಪ್ರಿಲ್ 21 ರಿಂದ ಜಾರಿಗೊಳಿಸಿದ ಹೊಸ ಮಾರ್ಗಸೂಚಿಗಳ ಪ್ರಕಾರ ಮದುವೆಗೆ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಧಾರವಾಡ ಜಿಲ್ಲಾಡಳಿತವು ಈ ನಿಯಮ ಪಾಲನೆ ಹಾಗೂ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ವಿಶೇಷ ಕ್ರಮ ಜರುಗಿಸಿದೆ.

ಮದುವೆಗಳಲ್ಲಿ ಭಾಗವಹಿಸುವ 50 ಜನರ ಕೈಗಳಿಗೆ ಧರಿಸಲು ವಿಶೇಷವಾದ ಬ್ಯಾಂಡ್‍ಗಳನ್ನು ನೀಡಲು ಆಯೋಜಕರಿಗೆ ಸೂಚಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಮಹಾನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮೇ 4ರವರೆಗೆ ಜರುಗುವ ಮದುವೆಗಳಿಗೆ ಅನುಮತಿ ಪಡೆಯುವುದನ್ನು ಜಿಲ್ಲೆಯಲ್ಲಿ ಕಡ್ಡಾಯಗೊಳಿಸಲಾಗಿದೆ.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಲಯ ಸಹಾಯಕ ಆಯುಕ್ತರು ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಉಳಿದ ಎಲ್ಲ ತಾಲೂಕು ವ್ಯಾಪ್ತಿಯಲ್ಲಿ ತಹಶೀಲ್ದಾರರು ಮದುವೆಗಳ ಆಯೋಜನೆಗೆ ಅನುಮತಿ ನೀಡಲು ಆದೇಶಿಸಲಾಗಿದೆ.

ಮದುವೆಗಳಲ್ಲಿ ನಿಯಮ ಮೀರಿ 50ಕ್ಕಿಂತ ಹೆಚ್ಚು ಜನ ಪಾಲ್ಗೊಳ್ಳದಂತೆ ಜಾಗೃತಿ ವಹಿಸಲು ಹಾಗೂ ಆಯೋಜಕರಿಗೆ ಸಂಖ್ಯಾ ನೀತಿ ಖಾತರಿಪಡಿಸಿಕೊಳ್ಳಲು ಅನುಮತಿಯೊಂದಿಗೆ ಅನುಕ್ರಮ ಸಂಖ್ಯೆ ಇರುವ 50 ವಿಶೇಷವಾದ ಬ್ಯಾಂಡ್‍ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ.

ವಾಟರ್ ಪ್ರೂಫ್ ಬ್ಯಾಂಡ್ಸ್ : ಈ ಬ್ಯಾಂಡ್‍ಗಳು ಜಲನಿರೋಧಕವಾಗಿವೆ (ವಾಟರ್‍ಪ್ರೂಫ್). ಕೈಗಳಿಗೆ ಧರಿಸಿದಾಗ ಮಡಿಕೆ ಬೀಳದೆ ಇರುವಂತೆ ಹಾಗೂ ಒಬ್ಬ ವ್ಯಕ್ತಿ ಒಂದುಸಲ ಧರಿಸಿದರೆ ಅದನ್ನು ತೆಗೆದು ಮರು ಬಳಕೆ ಮಾಡಲು ಅಥವಾ ಮತ್ತೊಬ್ಬರಿಗೆ ಬ್ಯಾಂಡ್ ವರ್ಗಾಯಿಸಲು ಬರುವುದಿಲ್ಲ.

ಬ್ಯಾಂಡ್
ಬ್ಯಾಂಡ್

ಒಂದುವೇಳೆ ವರ್ಗಾಯಿಸಲು ಪ್ರಯತ್ನಿಸಿದರೆ ಅದು ತುಂಡಾಗುತ್ತದೆ. ಇದರಿಂದ ಕೇವಲ 50 ಜನ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದನ್ನು ನಿಗಾವಹಿಸಲು ಸಾಧ್ಯವಾಗುತ್ತದೆ. ಮತ್ತು ಈ ಬ್ಯಾಂಡ್ ಧರಿಸಿದ ಮದುವೆಯು ಅನುಮತಿ ಪಡೆದಿರುವುದನ್ನು ಗುರುತಿಸುತ್ತದೆ.

ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಪ್ರತಿ ಹಂತದಲ್ಲೂ ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಡಳಿತ ವಿವಿಧ ರೀತಿಯ ಜನಜಾಗೃತಿ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಮದುವೆ ಆಯೋಜಕರು, ಸಾರ್ವಜನಿಕರು ಸಹಕಾರ ನೀಡಿ, ಜಿಲ್ಲಾಡಳಿತದ ಕ್ರಮಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಮನವಿ ಮಾಡಿದ್ದಾರೆ.

ಜಿಲ್ಲೆಯ ಯಾವುದೇ ಒಳಾಂಗಣ ಸಭಾಂಗಣಗಳು ಅಥವಾ ತೆರೆದ ಪ್ರದೇಶಗಳಲ್ಲಿ ನಡೆಯುವ ಮದುವೆಗಳಲ್ಲಿ 50 ಜನರಿಗೆ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ. ಈ ನಿಯಮ ಪಾಲನೆಯ ಕುರಿತು ನಿರಂತರ ಪರಿಶೀಲನೆ ನಡೆಯುತ್ತಿರುತ್ತದೆ.

ಯಾರಾದರೂ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮಕೈಗೊಳ್ಳಲಾಗುವುದು. ತಮ್ಮ ಸುತ್ತಲಿನ ಪ್ರದೇಶಗಳಲ್ಲಿ ಇಂತಹ ಮದುವೆ ಸಮಾರಂಭಗಳು ಕಂಡು ಬಂದರೆ ಕಂದಾಯ, ಪೊಲೀಸ್ ಅಥವಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸಾರ್ವಜನಿಕರು ಮಾಹಿತಿ ನೀಡಬೇಕು.

ಮದುವೆ ಆಯೋಜಕರಿಗೆ ಹಾಗೂ ಕಲ್ಯಾಣ ಮಂಟಪ, ಸಮುದಾಯ ಭವನಗಳ ನಿರ್ವಾಹಕರಿಗೆ ಅನುಮತಿಸಲಾದ ಸಂಖ್ಯೆಯ ಮಿತಿಯನ್ನು ದಾಟದಂತೆ ಎಚ್ಚರಿಕೆ ವಹಿಸಲು ಧಾರವಾಡ ಜಿಲ್ಲಾಡಳಿತದಿಂದ ಈ ನೂತನ ಬ್ಯಾಂಡ್ ಧರಿಸುವ ಕ್ರಮವನ್ನು ಜಾರಿಗೊಳಿಸಿದೆ.

ಮಾರ್ಗಸೂಚಿಯಲ್ಲಿ ತಿಳಿಸಿರುವ ಸಂಖ್ಯೆಗಿಂತ ಹೆಚ್ಚು ಜನ ಭಾಗವಹಿಸಿರುವುದು ಕಂಡು ಬಂದಲ್ಲಿ ಮದುವೆ ಆಯೋಜಕರ ಹಾಗೂ ಮದುವೆ ಮಂಟಪದ ಮಾಲೀಕರ ಮೇಲೆ ಎಫ್‍ಐಆರ್ ದಾಖಲಿಸಿ, ತಕ್ಷಣ ಕಲ್ಯಾಣ ಮಂಟಪ ಸೀಜ್ ಮಾಡಲಾಗುವುದೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.