ಧಾರವಾಡ: ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧೆ ಮಾಡಿದ ಅಭ್ಯರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ನಡೆದಿದೆ.
ಧಾರವಾಡದ ಗರಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ವಾರ್ಡ್ ನಂ.2 ರಲ್ಲಿ ಸ್ಪರ್ಧೆ ಮಾಡಿದ್ದ, ದಾಮೋದರ ಯಲಿಗಾರ (33) ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿಯಾಗಿದ್ದಾರೆ.
ಇಂದು ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಗರಗ ಗ್ರಾಮ ಪಂಚಾಯತಿಗೂ ಕೂಡ ಮತದಾನ ನಡೆಯುತ್ತಿದೆ. ಗರಗ ಗ್ರಾಮದಲ್ಲಿನ ಮನೆಯ ಕೋಣೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಲಿನ ಭೀತಿಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ.
ಇನ್ನು ಹದಿನೈದು ದಿನಗಳಲ್ಲಿ ಪತ್ನಿಯ ಹೆರಿಗೆ ಇತ್ತು. ಇವೆಲ್ಲದರ ನಡುವೆ ದಾಮೋದರ ಅವರು ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ದಾಮೋದರ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಅವರ ಆಪ್ತ ವರ್ಗದಲ್ಲಿ ಗುರುತಿಸಿಕೊಂಡಿದ್ದರು.
ಓದಿ: ಗ್ರಾ.ಪಂ. ಚುನಾವಣೆ : ಧಾರವಾಡ ಜಿಲ್ಲೆಯಲ್ಲಿ ಬೆಳಗ್ಗೆಯಿಂದ ಬಿರುಸಿನ ಮತದಾನ