ಧಾರವಾಡ: ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಲಾಕ್ಡೌನ್ ಮಾಡಲಾಗಿದೆ. ಈ ಅವಧಿಯಲ್ಲಿ ರೈತರು ಮುಂಗಾರು ಪೂರ್ವ ಚಟುವಟಿಕೆ ಚುರುಕುಗೊಳಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ರೈತ ಸಮುದಾಯಕ್ಕೆ ನೆರವು ನೀಡಲು ಧಾರವಾಡ ಕೃಷಿ ವಿಶ್ವವಿದ್ಯಾಲಯ ಮುಂದಾಗಿದೆ.
ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕೃವಿವಿ ಅಗ್ರಿ ವಾರ್ ರೂಮ್ ಸ್ಥಾಪಿಸಿ ನೆರವು ನೀಡುತ್ತಿದೆ. ಈ ಲಾಕ್ಡೌನ್ ಅವಧಿಯಲ್ಲಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಸಿಗದೇ ಬೆಳೆಗಳನ್ನು ಹಾಳು ಮಾಡಿಕೊಳ್ಳುತ್ತಿದೆ. ಕೃವಿವಿ ಅಗ್ರಿ ವಾರ್ ರೂಮ್ ಸ್ಥಾಪಿಸಿ ರೈತರಿಗೆ ಸಲಹೆ ಸೂಚನೆ ನೀಡುವ ಉದ್ದೇಶದಿಂದ ಈ ವ್ಯವಸ್ಥೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಟ್ಟಿದೆ.
ಅಗ್ರಿ ವಾರ್ ರೂಮ್ ಬೆಳಗ್ಗೆ 8 ರಿಂದ ರಾತ್ರಿ 8 ಗಂಟೆ ವರೆಗೆ ಕಾರ್ಯ ನಿರ್ವಹಿಸುತ್ತದೆ. ಟೋಲ್ ಫ್ರೀ ನಂಬರ್ 18004251150 ಸಹಾಯವಾಣಿ ಆರಂಭಿಸಿ ರೈತರಿಗೆ ಸಹಾಯ ಮಾಡುತ್ತಿದೆ. ರೈತರು ಯಾವುದೇ ಸಮಸ್ಯೆಗಳಿಗೆ ಕರೆ ಮಾಡಿದರೂ ಅವರಿಗೆ ಸರಿಯಾದ ಸಲಹೆ ನೀಡುವಲ್ಲಿ ವಿಜ್ಞಾನಿಗಳು ಸಹಾಯ ಮಾಡುತ್ತಿದ್ದಾರೆ.
ರಾಜ್ಯದ ವಿವಿಧ ಕಡೆಗಳಿಂದ ರೈತರು ಸಹಾಯವಾಣಿಗೆ ಕರೆ ಮಾಡಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ರೈತರು ಮಾಡುತ್ತಿದ್ದಾರೆ.