ETV Bharat / state

ಕೃವಿವಿ 36ನೇ ಘಟಿಕೋತ್ಸವ: ತುಳಸಿಗೌಡ, ಅಬ್ದುಲ್​ ಖಾದರ್​ ಇಮಾಮ್‍ ಸಾನ್​ ನಡಕಟ್ಟಿಗೆ ಗೌರವ ಡಾಕ್ಟರೇಟ್ ಪ್ರದಾನ

Dharwad agriculture university convocation: 71 ಪಿಹೆಚ್​ಡಿ, 269 ಸ್ನಾತಕೋತ್ತರ, 626 ಸ್ನಾತಕ ಪದವಿ ಒಳಗೊಂಡಂತೆ ಒಟ್ಟು 966 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

Dharwad agriculture university convocation
ಕೃವಿವಿ 36ನೇ ಘಟಿಕೋತ್ಸವ
author img

By

Published : Jun 13, 2023, 11:49 AM IST

ಕೃವಿವಿ 36ನೇ ಘಟಿಕೋತ್ಸವ

ಧಾರವಾಡ: ಕೃಷಿ ಅಭಿವೃದ್ಧಿಯಾಗದೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗದು. ನೈಸರ್ಗಿಕ ಬದಲಾವಣೆಗಳಿಂದಾಗಿ ಭವಿಷ್ಯದಲ್ಲಿ ಕೃಷಿಗೆ ಅನೇಕ ಸವಾಲುಗಳು ಎದುರಾಗುತ್ತವೆ. ಅವುಗಳನ್ನು ಪರಿಹರಿಸಿ, ಅಭಿವೃದ್ಧಿ ಸಾಧಿಸಲು ನೂತನ ಪದವಿಧರರು ಬದ್ಧತೆ ತೋರಬೇಕು ಎಂದು ಭಾರತ ಸರ್ಕಾರದ ಕೃಷಿ ಸಂಶೋಧನೆ ಹಾಗೂ ಶಿಕ್ಷಣ ವಿಭಾಗದ ಕಾರ್ಯದರ್ಶಿ ಹಾಗೂ ಭಾರತೀಯ ಕೃಷಿ ಅನುಸಂದಾನ ಪರಿಷತ್ತಿನ ಮಹಾನಿರ್ದೇಶಕ ಡಾ. ಹಿಮಾಂಶು ಪಾಠಕ್ ಹೇಳಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿದ್ದ 36ನೇ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಅವರು ಘಟಿಕೋತ್ಸವ ಭಾಷಣ ಮಾಡಿದರು. "ಸಮಾಜ ಸೇವೆ ಮತ್ತು ಪ್ರಚಲಿತದಲ್ಲಿನ ಪದ್ಧತಿಗಳನ್ನು ಸುಧಾರಿಸಿ, ಕೃಷಿ ಲಾಭದಾಯಕವಾಗಿ ಮಾಡುವುದು ಕೃಷಿ ಶಿಕ್ಷಣದ ಉದ್ದೇಶವಾಗಿದೆ. ನೂತನ ತಂತ್ರಜ್ಞಾನ ಬಳಕೆ ಹೆಚ್ಚಬೇಕು ಮತ್ತು ಪ್ರಾಯೋಗಿಕ ಪಾಠದ ಶಿಕ್ಷಣ ಹೆಚ್ಚು ಪರಿಣಾಮ ಬೀರುತ್ತದೆ" ಎಂದು ಅವರು ತಿಳಿಸಿದರು.

ಕೃಷಿ ವಿಶ್ವವಿದ್ಯಾಲಯದ ಸಾಧನೆ ಹಾಗೂ ಸಂಶೋಧನೆಗಳ ಬಗ್ಗೆ ಮೆಚ್ವುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಪದವಿ ಪಡೆದ ನಂತರ ಕಲಿತ ಶಿಕ್ಷಣ, ಪಡೆದ ಜ್ಞಾನವನ್ನು ಬಳಸಿಕೊಂಡು ತಾವೂ ಬೆಳೆಯಬೇಕು ಮತ್ತು ರಾಷ್ಟ್ರವನ್ನು ಬೆಳೆಸಬೇಕು ಎಂದು ಡಾ. ಹಿಮಾಂಶು ಪಾಠಕ್ ಸಲಹೆ ನೀಡಿದರು.

Dharwad agriculture university convocation
ತುಳಸಿಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನ

ಆತ್ಮನಿರ್ಭರ ಭಾರತಕ್ಕೆ ಕೈ ಜೋಡಿಸಬೇಕು: ಘಟಿಕೋತ್ಸವದಲ್ಲಿ ರಾಜ್ಯಪಾಲ ಹಾಗೂ ಕೃಷಿ ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿ ಕೃಷಿ ಪದವಿಧರರು ಆತ್ಮನಿರ್ಭರ ಭಾರತಕ್ಕೆ ಕೈ ಜೋಡಿಸಬೇಕು. ಕಲಿತ ಜ್ಞಾನವನ್ನು ಇತರರೊಂದಿಗೆ ಹಂಚಿಕೊಳ್ಳಬೇಕು. ಭಾರತ ಕೃಷಿ ಪ್ರಧಾನ ರಾಷ್ಟ್ರ. ದೇಶದ ಅರ್ಥವ್ಯವಸ್ಥೆಗೆ ಕೃಷಿ ಮುಖ್ಯವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ, ಕೃಷಿಕರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ವಿಶ್ವಶಾಂತಿ ಹಾಗೂ ವಿಶ್ವ ಕಲ್ಯಾಣಕ್ಕಾಗಿ ಭಾರತ ಮುಂದಾಳತ್ವ ವಹಿಸುತ್ತಿದೆ. ಯುವ ಜನರು ಕೃಷಿಗೆ ಹೆಚ್ಚು ಆದ್ಯತೆ ನೀಡಿ ಶ್ರಮಿಸಬೇಕೆಂದು ರಾಜ್ಯಪಾಲರು ಕರೆ ನೀಡಿದರು.

ಸಂಶೋಧಕರು ರೈತರೊಂದಿಗೆ ನಿಲ್ಲಬೇಕು: ಕೃಷಿ ಸಚಿವ ಮತ್ತು ಕೃಷಿ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಎನ್. ಚೆಲುವರಾಯಸ್ವಾಮಿ ಮಾತನಾಡಿ "ಧಾರವಾಡ ಕೃಷಿ ವಿಶ್ವವಿದ್ಯಾಲಯ ಶಿಕ್ಷಣ, ಸಂಶೋಧನೆ ಮತ್ತು ಕೃಷಿ ತಂತ್ರಜ್ಞಾನ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಕೀರ್ತಿ, ಯಶಸ್ಸು ಗಳಿಸಿದೆ. ಕೃಷಿ ಇಲಾಖೆ, ಕೃಷಿ ವಿವಿ ಮತ್ತು ಸಂಶೋಧಕರು ರೈತರೊಂದಿಗೆ ನಿಲ್ಲಬೇಕು. ಹೊಸ ತಳಿಗಳನ್ನು ಸಂಶೋಧಿಸಿ, ಕೃಷಿ ಲಾಭದಾಯವಾಗುವಂತೆ ಮಾಡಬೇಕು ಎಂದು ಹೇಳಿದರು.

ಪದವಿ ಪಡೆದು ವಿವಿಯಿಂದ ಹೊರ ಬರುತ್ತಿರುವ ಯುವ ಕೃಷಿ ಮಿತ್ರರು, ವಿಜ್ಞಾನಿಗಳು ತಾವು ಕಲಿಕೆಯಲ್ಲಿ ಪಡೆದ ಜ್ಞಾನವನ್ನು ರೈತರ ಜಮೀನುಗಳಲ್ಲಿ, ಕ್ಷೇತ್ರ ಮಟ್ಟದಲ್ಲಿ ಬಳಸಿ, ಬದಲಾವಣೆ ತರಬೇಕು. ಕೃಷಿ ಆಧುನೀಕರಣಗೊಳಿಸಲು ಮತ್ತು ಹೆಚ್ಚು ಲಾಭದಾಯಕಗೊಳಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅನೇಕ ಯೋಜನೆಗಳ ಮೂಲಕ ಪ್ರೋತ್ಸಾಹ ನೀಡುತ್ತಿವೆ. ರೈತರನ್ನು ಸಶಕ್ತರನ್ನಾಗಿ, ಸುಖಿಗಳನ್ನಾಗಿ ಮಾಡಲು ಪ್ರಾಮುಖ್ಯತೆ ನೀಡಬೇಕು ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದರು.

ಗೌರವ ಡಾಕ್ಟರೇಟ್ ಪ್ರದಾನ: ಕೃಷಿ ವಿಶ್ವವಿದ್ಯಾಲಯದ 36ನೇ ಘಟಿಕೋತ್ಸವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಉಳುವರೆ ಗ್ರಾಮದ ಪದ್ಮಶ್ರೀ ತುಳಸಿಗೌಡ ಮತ್ತು ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ವಿಶ್ವಶಾಂತಿ ಕೃಷಿ ಸಂಶೋಧನಾ ಕೇಂದ್ರದ ಸಂಸ್ಥಾಪಕ ಪದ್ಮಶ್ರೀ ಅಬ್ದುಲ್​ ಖಾದರ್​ ಇಮಾಮ್‍ ಸಾಬ್​ ನಡಕಟ್ಟಿನ ಅವರಿಗೆ ರಾಜ್ಯಪಾಲರು ಮತ್ತು ಕೃಷಿ ವಿವಿಯ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

ಇದನ್ನೂ ಓದಿ: Tulsi Gowda: ಧಾರವಾಡದ ಕೃಷಿ ವಿವಿಯಿಂದ ಪದ್ಮಶ್ರೀ ಪುರಸ್ಕೃತ ತುಳಸಿ ಗೌಡಗೆ ಡಾಕ್ಟರೇಟ್ ಪದವಿ ಘೋಷಣೆ

ಪಿಹೆಚ್‍ಡಿ, ಸ್ನಾತಕ, ಸ್ನಾತಕೋತ್ತರ ಪದವಿ ಪ್ರದಾನ: ಕೃವಿವಿ 36 ನೇ ಘಟಿಕೋತ್ಸವದಲ್ಲಿ 71 ಪಿಹೆಚ್​ಡಿ, 269 ಸ್ನಾತಕೋತ್ತರ, 626 ಸ್ನಾತಕ ಪದವಿ ಒಳಗೊಂಡಂತೆ ಒಟ್ಟು 966 ಅಭ್ಯರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು. ಘಟಿಕೋತ್ಸವದಲ್ಲಿ 404 ಕೃಷಿ, 66 ಕೃಷಿ ಮಾರುಕಟ್ಟೆ ಮತ್ತು ಸಹಕಾರ, 63 ಅರಣ್ಯ, 65 ಸಮುದಾಯ ವಿಜ್ಞಾನ, 28 ಬಿ.ಟೆಕ್ ಹೀಗೆ ಒಟ್ಟು 626 ಸ್ನಾತಕ ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಚಿನ್ನದ ಪದಕ ವಿಜೇತ ಸ್ನಾತಕ ಪದವಿಧರರು: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಷಯದಲ್ಲಿ ಅಕ್ಷತಾ ಕೆ.ವಿ, ಅವರು ಹೆಚ್ಚು ಚಿನ್ನದ ಪದಕ ಪಡೆದು ಈ ವರ್ಷದ ಕೃ.ವಿ.ವಿ ಚಿನ್ನದ ಹುಡುಗಿ ಎನಿಸಿಕೊಂಡಿದ್ದಾರೆ. ತೋಟಗಾರಿಕೆ ವಿಷಯದಲ್ಲಿ ರೇಣುಕಾ ಎ. ಶಹಪುರ, ಕೃಷಿ ಮಾರುಕಟ್ಟೆ ಮತ್ತು ಸಹಕಾರ ವಿಷಯದಲ್ಲಿ ವೀಣಾ ರವಿ ನಾಯ್ಕ ಅವರು ಚಿನ್ನದ ಪದಕ ಪಡೆದರು.

ಕೃಷಿ ವಿಶ್ವವಿದ್ಯಾಲಯ ಧಾರವಾಡ ಆವರಣದಲ್ಲಿನ ಕೃಷಿ ಹಾಗೂ ಕೃಷಿ ಮಾರುಕಟ್ಟೆ ಮತ್ತು ಸಹಕಾರ ಸ್ನಾತಕ ಪದವಿಗಳಲ್ಲಿ ಉತ್ತಮ ಕ್ರೀಡಾಪಟುವಿಗೆ ನೀಡುವ ನಗದು ಪುರಸ್ಕಾರವನ್ನು ಲೋಚನ ಬೋಪಣ್ಣ ಎಂ.ಎಸ್. ಮತ್ತು ವಿಜಯಪುರ ಕೃಷಿ ಮಹಾವಿದ್ಯಾಲಯದ ಆಶಾ ಬಿ. ಕಾಡಪ್ಪಗೋಳ, ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದ ನಿಶ್ಚಿತಾ ಜಿ. ಪಿ., ಶಿರಸಿ ಅರಣ್ಯ ಮಹಾವಿದ್ಯಾಲಯದ ರಘು ಅಂಗಡಿ, ಧಾರವಾಡ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಎಂ. ಉಮಾ ಮತ್ತು ಬಿ.ಟೆಕ್ ದಲ್ಲಿ ಅತಿ ಹೆಚ್ವು ಅಂಕ ಗಳಿಸಿದ ಕೀರ್ತಿ ಶಿರಿಯಣ್ಣವರ ಚಿನ್ನದ ಪದಕ ಸ್ವೀಕರಿಸಿದರು.

ಇದನ್ನೂ ಓದಿ: ಕೆಎಲ್ಇ 13ನೇ ಘಟಿಕೋತ್ಸವ: ಗುಣಮಟ್ಟದ ಶಿಕ್ಷಣ, ನೈತಿಕ ಮೌಲ್ಯಗಳಿಂದ ರಾಷ್ಟ್ರ ನಿರ್ಮಾಣ- ಗೆಹ್ಲೋಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.