ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ನಿನ್ನೆ ಕರ್ತವ್ಯನಿರತ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಧಾರವಾಡ ವಿದ್ಯಾಗಿರಿ ಠಾಣೆಯ ಸಿಬ್ಬಂದಿ ನಿಂಗಪ್ಪ ಭೂಸಣ್ಣವರ, ಕೆಎಂಎಫ್ ಬಳಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಬೋರ್ವೆಲ್ ಲಾರಿಯ ಎಡಭಾಗದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು.
ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗೆ ಊಟ ಕೊಡಲು ಕಾನ್ಸ್‌ಟೇಬಲ್ ನಿಂಗಪ್ಪ ಭೂಸಣ್ಣವರ ಹೊರಟಿದ್ದರು. ಅಪಘಾತದ ದೃಶ್ಯವು ಅಂಗಡಿಯಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದ ಸ್ಥಳಕ್ಕೆ ಪೊಲೀಸ್ ಆಯುಕ್ತ ಲಾಬೂರಾಮ್ ಸೇರಿ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: ಸಿಬ್ಬಂದಿಗೆ ಊಟ ನೀಡಲು ತೆರಳುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ಅಪಘಾತಕ್ಕೆ ಬಲಿ