ಧಾರವಾಡ: ತಾಲೂಕಿನ ಬಾಡ ಬಳಿ ಇತ್ತೀಚೆಗೆ ನಡೆದ ಕ್ರೂಸರ್ ವಾಹನ ಅಪಘಾತ ಪ್ರಕರಣದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಮೂಲಕ ಸಾವಿನ ಸಂಖ್ಯೆ 11ಕ್ಕೇರಿದೆ. ಐದು ವರ್ಷದ ಆರಾಧ್ಯ ಹುತಮಲ್ಲನ್ನವರ ಮೃತಪಟ್ಟ ಬಾಲಕಿ. ಕಳೆದ 6 ದಿನಗಳಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಈಕೆಗೆ ಚಿಕಿತ್ಸೆ ನೀಡಲಾಗುತ್ತಿತ್ತು.
ಮೇ 20ರಂದು ಬಾಡ ಬಳಿ ನಡೆದ ಭೀಕರ ಅಪಘಾತದಲ್ಲಿ 9 ಜನ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಮದುವೆ ನಿಶ್ಚಿತಾರ್ಥ ಮುಗಿಸಿಕೊಂಡು ವಾಪಸ್ ಬರುವಾಗ ಚಾಲಕನ ಅಜಾರೂಗಕತೆಯಿಂದ ವಾಹನ ಮರಕ್ಕೆ ಡಿಕ್ಕಿ ಹೊಡೆದಿತ್ತು. ಪರಿಣಾಮ, ಸ್ಥಳದಲ್ಲೇ ಏಳು ಜನ ಹಾಗೂ ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ಮೃತಪಟ್ಟಿದ್ದರು.
ಇದನ್ನೂ ಓದಿ: ಕ್ರೂಸರ್ ವಾಹನ ಅಪಘಾತ ಪ್ರಕರಣ : ಸಾವಿನ ಸಂಖ್ಯೆ 10ಕ್ಕೆ ಏರಿಕೆ