ಧಾರವಾಡ: ಜಿಲ್ಲಾಧಿಕಾರಿ ದೀಪಾ ಚೋಳನ್ ಅವರ ವರ್ಗಾವಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಅವರಿಂದ ತೆರವಾದ ಸ್ಥಾನವನ್ನು ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯ್ತುಕ್ತರಾಗಿದ್ದ ನಿತೇಶ ಪಾಟೀಲ್ ಅವರು ತುಂಬಲಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರನ್ನು ಸರ್ವ ಶಿಕ್ಷಣಾ ಅಭಿಯಾನದ ಯೋಜನಾ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.
ದೀಪಾ ಚೋಳನ್ ಅವರು 2018ರ ಜುಲೈ 18ರಂದು ಧಾರವಾಡ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು.