ETV Bharat / state

ಸಾಮಾಜಿಕ ಅಂತರದೊಂದಿಗೆ ಸ್ವಾತಂತ್ರ್ಯ ದಿನಾಚರಣೆ: ಜಿಲ್ಲಾಧಿಕಾರಿ

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಪೂರ್ವಭಾವಿ ಸಭೆ ನಡೆಸಿದ್ದು, ಕೋವಿಡ್ ಹಿನ್ನೆಲೆ ಪ್ರಸಕ್ತ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ ಕುರಿತು ಚರ್ಚೆ ನಡೆಸಲಾಯಿತು.

DC meeting
DC meeting
author img

By

Published : Jul 31, 2020, 4:33 PM IST

ಧಾರವಾಡ: ಅಗಸ್ಟ್ 15ರಂದು ನಡೆಯಲಿರುವ 74ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದು, ಈ ವೇಳೆ ಕೊರೊನಾ ವಾರಿಯರ್​​​ಗಳನ್ನು ಗುರುತಿಸಿ ಗೌರವಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನೆಲೆ ಪ್ರಸಕ್ತ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆ ಕುರಿತು ಕೇಂದ್ರ ಸರ್ಕಾರದ ಗೃಹ ಸಚಿವಾಲಯವು ಕೆಲವು ಮಾರ್ಗದರ್ಶನಗಳನ್ನು ನೀಡಿದೆ. ಈ ಮಾರ್ಗದರ್ಶನದ ಪ್ರಕಾರ ಜಿಲ್ಲಾ ಮಟ್ಟದಲ್ಲಿ ಪರೇಡ್, ಧ್ವಜಾರೋಹಣ ಕಾರ್ಯಕ್ರಮ ಮಾಡಬೇಕು ಎಂದರು.

ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ. ಸಾಮಾಜಿಕ ಅಂತರ ಕಾಪಾಡಿಕೊಂಡು ಆಯ್ದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಆರೋಗ್ಯ ಇಲಾಖೆ, ಕಿಮ್ಸ್ ವೈದ್ಯರು, ನರ್ಸ್, ಪೌರಕಾರ್ಮಿಕರು, ಸಹಾಯಕ ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದರು.

ಎಲ್ಲಾ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಬೆಳಿಗ್ಗೆ 7:30ಕ್ಕೆ ಧ್ವಜಾರೋಹಣ ನೆರವೇರಿಸಿ, 8:30ಕ್ಕೆ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಸಮಾವೇಶಗೊಳ್ಳಬೇಕು. 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಪೊಲೀಸ್, ಗೃಹರಕ್ಷಕ ದಳ, ಅರಣ್ಯ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಪಥಸಂಚಲನ ನಡೆಯಲಿದೆ ಎಂದು ಹೇಳಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.