ETV Bharat / state

ಧಾರವಾಡದಲ್ಲಿ ಮತ ಎಣಿಕೆಗೆ ಜಿಲ್ಲಾಡಳಿತ ಸಜ್ಜು

author img

By

Published : May 12, 2023, 10:15 PM IST

ನಾಳೆ ಮತ ಎಣಿಕೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

dharwad-district-administration-is-ready-for-counting
ನಾಳೆ ಕೌಂಟಿಂಗ್​ಗೆ ಧಾರವಾಡ ಜಿಲ್ಲಾಡಳಿತ ಸಕಲ ಸಿದ್ಧತೆ: ಮತ ಎಣಿಕೆ ಕೇಂದ್ರದ ಸುತ್ತ ಮೂರು ಹಂತದ ಭದ್ರತಾ ವ್ಯವಸ್ಥೆ

ಧಾರವಾಡ: ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ 7 ವಿಧಾನಸಭಾ ಮತಕ್ಷೇತ್ರಗಳ ಮತ ಎಣಿಕೆಯು ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಮುಖ್ಯ ಕಟ್ಟಡದಲ್ಲಿ ಶನಿವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಹು-ಧಾ ಸೆಂಟ್ರಲ್ ಹಾಗೂ ಹು-ಧಾ ಪಶ್ಚಿಮ ಮತಕ್ಷೇತ್ರಗಳ 19 ಸುತ್ತಿನ ಮತ ಎಣಿಕೆ ಹಾಗೂ ಜಿಲ್ಲೆಯ ಉಳಿದ ಮತಕ್ಷೇತ್ರಗಳ 17 ಸುತ್ತಿನ ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ, ಪ್ರತಿ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಗೆ ಪ್ರತ್ಯೇಕ ಕೊಠಡಿ ಮಾಡಲಾಗಿದೆ. ಅಂಚೆ ಮತಪತ್ರ ಮತ್ತು ವಿದ್ಯುನ್ಮಾನ ಮತಯಂತ್ರಗಳಲ್ಲಿನ ಮತ ಎಣಿಕೆಗಾಗಿ 13 ಸೇರಿ ಒಟ್ಟು 14 ಟೇಬಲ್​ ವ್ಯವಸ್ಥೆ ಮಾಡಲಾಗಿದೆ ಮಾಹಿತಿ ನೀಡಿದ್ದಾರೆ.

ನವಲಗುಂದ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಯು 17 ಸುತ್ತು, ಕುಂದಗೊಳ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಯು 17 ಸುತ್ತು, ಧಾರವಾಡ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಯು 17 ಸುತ್ತು, ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆಯು 17 ಸುತ್ತು, ಕಲಘಟಗಿ ವಿಧಾನಸಭಾ ಮತಕ್ಷೇತ್ರದ ಮತ ಎಣಿಕೆ 17 ಸುತ್ತುಗಳಲ್ಲಿ ನಡೆಯಲಿದೆ ಮತ್ತು ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ಹಾಗೂ ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರಗಳ ಮತ ಎಣಿಕೆ ಕಾರ್ಯವು 19 ಸುತ್ತುಗಳಲ್ಲಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮತ ಎಣಿಕೆ ಆರಂಭದಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭವಾಗುತ್ತದೆ. ಮತ್ತು ಸ್ವಲ್ಪ ಸಮಯದ ನಂತರ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ದಾಖಲಾಗಿರುವ ಮತಗಳ ಎಣಿಕಾ ಕಾರ್ಯ ಆರಂಭಿಸಲಾಗುತ್ತದೆ. ಮತ ಎಣಿಕೆ ಕೇಂದ್ರದ ಸುತ್ತ ಮೂರು ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ನಾಳೆ ಮಧ್ಯಾಹ್ನದ ಹೊತ್ತಿಗೆ ಚುನಾವಣಾ ಫಲಿತಾಂಶ ಬರುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಮತ ಎಣಿಕೆಗೆ ಗದಗ ಜಿಲ್ಲಾಡಳಿತ ಸಜ್ಜು: ಮತ್ತೊಂದೆಡೆ ಮುದ್ರಣ ಕಾಶಿ ಗದಗ ಜಿಲ್ಲೆಯಲ್ಲೂ ಮತ ಎಣಿಕೆಗೆ ಅಗತ್ಯ ಸಿದ್ಧತೆ ನಡೆದಿದೆ. ನಗರದ ಶ್ರೀ ತೋಂಟದಾರ್ಯ ಇಂಜಿನಿಯರಿಂಗ್ ಕಾಲೇಜ್‍ನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಈಗಾಗಲೇ ಮತ ಎಣಿಕೆ ಕೇಂದ್ರದ ಸುತ್ತಲೂ 144 ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಎಣಿಕೆ ಕೇಂದ್ರದ ಸುತ್ತಲೂ 200 ಮೀಟರ್ ಪ್ರದೇಶದಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ನಾಳೆ‌ ಬೆಳಗ್ಗೆ ಬೆಳಿಗ್ಗೆ 5 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಹಲವು ಷರತ್ತುಗಳನ್ನ ವಿಧಿಸಿ ಜಿಲ್ಲೆಯಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದ್ದು, 200 ಜನ ಹೋಮ್​ಗಾರ್ಡ್ಸ್, 02 ಕೆಎಸ್​ಆರ್​ಪಿ, 06 ಡಿಆರ್, 2ಸಿಆರ್ ಪಿಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ವೇಳೆ ಮದ್ಯ ಮಾರಾಟ ನಿಷೇಧಿಸಲಾಗಿದ್ದು, ಕೌಂಟಿಂಗ್ ಸೆಂಟರ್ ಹೊರಗಡೆ ಕಾರ್ಯಕರ್ತರಿಗೆ ಮತದಾನದ ಎಣಿಕೆ ಬಗ್ಗೆ ಮಾಹಿತಿ ನೀಡಲು, ಎರಡು‌ ಎಲ್ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ.‌

ಗೆದ್ದ‌ ಅಭ್ಯರ್ಥಿಗಳ ಪರ ಕಾರ್ಯಕರ್ತರು ವಿಜಯೋತ್ಸವ,‌ ಪಟಾಕಿ ಸಿಡಿಸುವಂತದ್ದಾಗಲಿ, ಯಾವುದೇ ಸಂಭ್ರಮಾಚರಣೆ ನಿರ್ಬಂಧಿಸಲಾಗಿದೆ. ರೂಲ್ಸ್ ಬ್ರೆಕ್ ಮಾಡಿದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡಗೆ ತಿಳಿಸಿದ್ದಾರೆ.

ಇದನ್ನೂ ಓದಿ:ನಾಳೆ ಮತ ಎಣಿಕೆ ಹಿನ್ನೆಲೆ ಎಲ್ಲ ರೀತಿಯ ಸಿದ್ದತೆ: ಕೊಡಗು ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.