ಧಾರವಾಡ : ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗದಿಂದ ದಂಡ ವಿಧಿಸಿದೆ. ಧಾರವಾಡದ ಯು.ಬಿ.ಹಿಲ್ ನಿವಾಸಿ ಅಶೋಕ ಹುದ್ದಾರ ಎಂಬುವವರು ಇಲ್ಲಿನ ಹೆಡ್‍ಪೋಸ್ಟ್ ಕಚೇರಿಯಲ್ಲಿ 15 ವರ್ಷಗಳ ಅವಧಿಯ ಹೆಚ್.ಯು.ಎಫ್, ಪಿ.ಪಿ.ಎಫ್ ಅಕೌಂಟ್ ತೆರೆದು ಯೋಜನೆಯಡಿ ಹಣ ತೊಡಗಿಸಿದ್ದರು. ಯೋಜನೆಯು ದಿ. 31-03-2015 ರಂದು ಮುಕ್ತಾಯಗೊಂಡಿತ್ತು. ತದನಂತರ ದೂರುದಾರ ಯೋಜನೆಯನ್ನು ಮತ್ತೆ 5 ವರ್ಷಗಳ ಅವಧಿಗೆ ಅಂದರೆ 01-04-2015 ರಿಂದ 31-03-2020 ರವರೆಗೆ ಮುಂದುವರೆಸಿದ್ದರು.
ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು: ಆ ಯೋಜನೆ ದಿ. 31-03-2020 ರಂದು ಮುಕ್ತಾಯವಾಗಿದ್ದರೂ ಅಲ್ಲಿಯವರೆಗಿನ ಅವರ ವಂತಿಗೆ ಹಣ ಮತ್ತು ಅದರ ಮೇಲಿನ ಬಡ್ಡಿ ಲೆಕ್ಕ ಹಾಕಿ ಅಂಚೆ ಇಲಾಖೆಯವರು ತನಗೆ ಹಣವನ್ನು ಹಿಂದಿರುಗಿಸದೇ ಸತಾಯಿಸಿ ತೊಂದರೆ ನೀಡಿ, ಸೇವಾ ನ್ಯೂನ್ಯತೆ ಎಸಗಿದ್ದಾರೆ ಅಂತಾ ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.
ಅಂಚೆ ಇಲಾಖೆಯವರು ದೂರಿಗೆ ಆಕ್ಷೇಪಣೆ ಎತ್ತಿ ಕೇಂದ್ರ ಸರ್ಕಾರದ ಸುತ್ತೋಲೆಯಂತೆ ಹೆಚ್.ಯು.ಎಫ್ ಪಿಪಿಎಫ್ ಯೋಜನೆಯನ್ನು ಮುಂದುವರೆಸಲು ಅವಕಾಶ ಇರುವುದಿಲ್ಲ. ಕಾರಣ 2015ರ ನಂತರ ಅವಧಿ ಮುಕ್ತಾಯವಾಗಿರುವುದರಿಂದ ಆ ನಂತರದ ಅವಧಿಗೆ ಬಡ್ಡಿಕೊಡಲು ಬರುವುದಿಲ್ಲ ಅಂದಿದ್ದರು. ದೂರುದಾರನಿಗೆ 2015ರ ವರೆಗಿನ ಹಣ ಮತ್ತು ನಂತರದ ಅವಧಿಯ ಅವರ ವಂತಿಗೆ ಹಣವನ್ನು ಮಾತ್ರ ಅವರಿಗೆ ವಾಪಸ್ ಕೊಡಬಹುದು ಅಂತಾ ಅಂಚೆ ಇಲಾಖೆಯವರು ಆಕ್ಷೇಪಿಸಿದ್ದರು.
ದೂರಿನ ಬಗ್ಗೆ ಕೂಲಂಕಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ. ಭೂತೆ, ಸದಸ್ಯರಾದ ವಿಶಾಲಾಕ್ಷಿ ಅ. ಬೋಳಶೆಟ್ಟಿ ಹಾಗೂ ಪ್ರಭು. ಸಿ ಹಿರೇಮಠ ಅಂಚೆ ಇಲಾಖೆಯ ಎಲ್ಲ ಆಕ್ಷೇಪಣೆಗಳನ್ನು ತಳ್ಳಿಹಾಕಿ, 2015ರ ನಂತರ ದೂರುದಾರರ ಹಣವನ್ನು ಜನರಲ್ ಪಿಪಿಎಫ್ ಯೋಜನೆಯಡಿ ಅಂಚೆ ಇಲಾಖೆಯವರು ಮುಂದುವರೆಸಿ ಆ ಹಣವನ್ನು ಬೇರೆಕಡೆ ವಿನಿಯೋಗಿಸಿ ಲಾಭ ಪಡೆದು ಈಗ ದೂರುದಾರನಿಗೆ ಬಡ್ಡಿಕೊಡಲು ನಿರಾಕರಿಸುತ್ತಿರುವುದು ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.
ಅಂಚೆ ಇಲಾಖೆಗೆ ನಿರ್ದೇಶನ : ದಿ. 28-03-2000 ರಿಂದ ಇಲ್ಲಿಯವರೆಗೆ ದೂರುದಾರನ ವಂತಿಗೆ ಮೇಲೆ ಬಡ್ಡಿ ಲೆಕ್ಕ ಹಾಕಿ ಅಂಚೆ ಇಲಾಖೆಯವರು ಅವರಿಗೆ ಒಟ್ಟು ರೂ. 28,34,686 ತೀರ್ಪು ನೀಡಿದ ಒಂದು ತಿಂಗಳೊಳಗಾಗಿ ನೀಡುವಂತೆ ಆದೇಶಿಸಿದೆ. ಸೇವಾ ನ್ಯೂನ್ಯತೆಯಿಂದ ದೂರುದಾರನಿಗೆ ಆಗಿರುವ ತೊಂದರೆ ಮತ್ತು ಹಿಂಸೆಗಾಗಿ 50,000 ರೂ. ಗಳ ಪರಿಹಾರ ಹಾಗೂ ರೂ.10,000 ಗಳ ಪ್ರಕರಣದ ಖರ್ಚು ವೆಚ್ಚ ಅಂತಾಕೊಡಲು ಅಂಚೆ ಇಲಾಖೆಗೆ ನಿರ್ದೇಶನ ನೀಡಲಾಗಿದೆ.
ಸರ್ಕಾರಿ ಜಾಗ ಖಾಸಗಿ ವ್ಯಕ್ತಿಗಳ ಹೆಸರಿಗೆ ಮಾಡಿದ ಆರೋಪದ ಮೇರೆಗೆ ಪಿಡಿಒ ಅಮಾನತು(ಗದಗ): ಕರ್ತವ್ಯಲೋಪ ಹಿನ್ನೆಲೆ ಡಂಬಳ ಗ್ರಾಮ ಪಂಚಾಯತ್ನ ಹಿಂದಿನ ಪ್ರಭಾರ ಪಿಡಿಒ ಎಸ್. ಕೆ ಕವಡೇಲಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಸಿಇಒ ಸುಶೀಲಾ ಬಿ ಆದೇಶ ಹೊರಡಿಸಿದ್ದಾರೆ. ಅಮಾನತು ಆದ ಎಸ್. ಕೆ. ಕವಡೇಲಿ ಅವರು ಸದ್ಯ ಕೊರ್ಲಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಗ್ರೇಡ್ 2 ಕಾರ್ಯದರ್ಶಿಯಾಗಿದ್ದರು. ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮ ಪಂಚಾಯಿತಿಯ ಪಿಡಿಒ ಆಗಿದ್ದಾಗ ಕರ್ತವ್ಯಲೋಪ ಎಸಗಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು.
ಈ ಬಗ್ಗೆ ಸಾಮಾಜಿಕ ಹೋರಾಟಗಾರ ಮಂಜಯ್ಯಸ್ವಾಮಿ ಅರವಟಗಿಮಠ ಎಂಬುವರು ಗದಗ ಜಿಪಂ ಸಿಇಒ ಮತ್ತು ಮುಂಡರಗಿ ತಾಪಂ ಇಒ ಅವರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ತನಿಖೆ ನಡೆಸಲಾಗಿತ್ತು. ಈ ವೇಳೆ, ಹಲವು ಪ್ರಕರಣಗಳಲ್ಲಿ ಅಕ್ರಮ ಎಸಗಿರುವುದು ಸಾಬೀತಾಗಿತ್ತು. ಈ ಹಿನ್ನೆಲೆ ಎಸ್. ಕೆ ಕವಡೇಲಿ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ಮುಂಡರಗಿ ತಾಲೂಕಿನ ಡಂಬಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಾಬುದ್ಧೀನ್ ಕವಡೇಲಿ ಅವರು ವರ್ಗಾವಣೆ ಮತ್ತು ಇವರ ಅಧಿಕಾರ ಅವಧಿಯಲ್ಲಿ ಅಕ್ರಮವಾಗಿ ಸರ್ಕಾರದ ಜಾಗಗಳನ್ನು ಖಾಸಗಿ ವ್ಯಕ್ತಿಗಳಿಗೆ ದಾಖಲು ಮಾಡಿದ್ದಾರೆ. ಬಗ್ಗೆ ತನಿಖೆ ನಡೆಸುವಂತೆ ಸಾಮಾಜಿಕ ಹೋರಾಟಗಾರ ಮಂಜಯ್ಯಸ್ವಾಮಿ ಅರವಟಗಿಮಠ ಎಂಬುವರು ಜಿಪಂ ಸಿಇಒ ಮತ್ತು ಮುಂಡರಗಿ ತಾಪಂ ಇಒ ಅವರಿಗೆ ದೂರು ಸಲ್ಲಿಸಿದ್ದರು.
ಸರ್ಕಾರಿ ಜಾಗವನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಮಾಡಿದ ಆರೋಪ : ಪಿಡಿಒ ಅಮಾನತು