ETV Bharat / state

ಧಾರವಾಡ ಜಿಲ್ಲೆಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಮಂಜೂರು - ಜಿಲ್ಲಾಧಿಕಾರಿ ಗರುದತ್ತ ಹೆಗಡೆ

Interim insurance sanctioned to Dharwad farmers: ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲೆಯಲ್ಲಿ 63,566 ಜನ ರೈತರಿಗೆ 50.298 ಕೋಟಿ ರೂ.ಗಳ ಮಧ್ಯಂತರ ವಿಮೆ ಮಂಜೂರಾಗಿದೆ ಎಂದು ತಿಳಿಸಿದ್ದಾರೆ.

Interim insurance sanctioned
ಮಧ್ಯಂತರ ಬೆಳೆ ವಿಮೆ ಮಂಜೂರು
author img

By ETV Bharat Karnataka Team

Published : Dec 6, 2023, 7:15 AM IST

Updated : Dec 6, 2023, 11:21 AM IST

ಧಾರವಾಡ: ಜಿಲ್ಲೆಯ 63,566 ಜನ ರೈತರಿಗೆ 50.298 ಕೋಟಿ ರೂ.ಗಳ ಮಧ್ಯಂತರ ವಿಮೆ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಗರುದತ್ತ ಹೆಗಡೆ ತಿಳಿಸಿದ್ದಾರೆ. 2023 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆ ಧಾರವಾಡ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಭತ್ತ, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಕೆಂಪು ಮೆಣಸಿನಕಾಯಿ ಮತ್ತು ಆಲೂಗಡ್ಡೆ ಬೆಳೆಗಳಡಿ ನೋಂದಾಯಿಸಿಕೊಂಡ ರೈತರಿಗೆ ಮಧ್ಯಂತರ ವಿಮೆ ಜಮಾವಣೆ ಪ್ರಾರಂಭವಾಗಿದೆ.

ಅಳ್ನಾವರ ತಾಲೂಕಿನ 3,052 ಜನ ರೈತರಿಗೆ 1.82 ಕೋಟಿ ರೂ.ಗಳ, ಅಣ್ಣಿಗೇರಿ ತಾಲೂಕಿನ 6,044 ಜನ ರೈತರಿಗೆ 6.45 ಕೋಟಿ ರೂ. ಗಳ, ಧಾರವಾಡ 9,978 ಜನ ರೈತರಿಗೆ 6.575 ಕೋಟಿ ರೂ. ಗಳ, ಹುಬ್ಬಳ್ಳಿ ತಾಲೂಕಿನ 9,472 ಜನ ರೈತರಿಗೆ 9.12 ಕೋಟಿ ರೂ. ಗಳ, ಹುಬ್ಬಳ್ಳಿ ನಗರ ತಾಲೂಕಿನ 301 ಜನ ರೈತರಿಗೆ 36.5 ಲಕ್ಷ ರೂ.ಗಳ, ಕಲಘಟಗಿ ತಾಲೂಕಿನ 15,248 ಜನ ರೈತರಿಗೆ 9.731 ಕೋಟಿ ರೂ. ಗಳ ಮತ್ತು ನವಲಗುಂದ ತಾಲೂಕಿನ 5,286 ಜನ ರೈತರಿಗೆ 5.282 ಕೋಟಿ ರೂ. ಗಳ ಮಧ್ಯಂತರ ವಿಮಾ ಪರಿಹಾರ ಜಮಾವಣೆಯಾಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಳೆ ಕೊರತೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಬೆಳೆ ವಿಮೆ ಯೋಜನೆಯಡಿ ಈ ರೀತಿಯ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಮಧ್ಯಂತರ ವಿಮೆ ಪರಿಹಾರ ಪಡೆಯಲು ಅವಕಾಶವಿದೆ. ಹೀಗಾಗಿ ಜಿಲ್ಲಾಡಳಿತದಿಂದ ಸಕಾಲಿಕ ಕ್ರಮ ಕೈಗೊಂಡ ನಿಮಿತ್ತ ಜಿಲ್ಲೆಯ 63,566 ಜನ ರೈತರಿಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಮಂಜೂರಾಗಿದೆ.

ವಿಮೆಗೆ ಒಳಪಟ್ಟ 56,995 ಹೆಕ್ಟೇರ್​ ಪ್ರದೇಶಕ್ಕೆ ವಿಮೆ ಪರಿಹಾರ ದೊರೆಯಲಿದೆ. ಧಾರವಾಡ ಜಿಲ್ಲೆಯ 1,11,057 ಜನ ರೈತರು ಈ ಯೋಜನೆಯಡಿ ವಿವಿಧ ಬೆಳೆಗಳಿಗೆ ನೋಂದಾಯಿಸಿಕೊಂಡಿರುತ್ತಾರೆ. ಒಟ್ಟು 1,05,065 ಹೆಕ್ಟೇರ್​ನಷ್ಟು ಬೆಳೆ ಪ್ರದೇಶ ವಿಮೆ ಯೋಜನೆಗೆ ಒಳಪಟ್ಟಿತ್ತು. ಪ್ರಕೃತಿ ವಿಕೋಪಗಳಿಂದ ಯಾವುದೇ ಅಧಿಸೂಚಿತ ಬೆಳೆ ವಿಫಲವಾದ ಪಕ್ಷದಲ್ಲಿ ರೈತರಿಗೆ ವಿಮಾ ರಕ್ಷಣೆ, ಆರ್ಥಿಕ ಬೆಂಬಲ ಮತ್ತು ಕೃಷಿ ಆದಾಯ ಸ್ಥಿರವಾಗಿರುವಂತೆ ಮಾಡಲು ನೆರವಾಗುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ.

ಇದನ್ನೂ ಓದಿ: ಕಿಮ್ಸ್ ಆಸ್ಪತ್ರೆಗೆ ಸರ್ಕಾರ ₹30 ಕೋಟಿ ಅನುದಾನ ನೀಡಲಿ: ಕಿಮ್ಸ್ ನಿರ್ದೇಶಕ

Last Updated : Dec 6, 2023, 11:21 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.