ಧಾರವಾಡ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಸುಶೀಲಾ ಬಿ. ಅಧಿಕಾರ ಸ್ವೀಕರಿಸಿದ್ದಾರೆ. ವರ್ಗಾವಣೆಗೊಂಡಿರುವ ಡಾ.ಬಿ.ಸಿ.ಸತೀಶ್ ಅಧಿಕಾರ ಹಸ್ತಾಂತರಿಸಿದ್ದಾರೆ.
ಹೈದರಾಬಾದ್ನ ಗಾಂಧಿ ಮೆಡಿಕಲ್ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದಿರುವ ಡಾ.ಸುಶೀಲಾ, ಕೆಲಕಾಲ ವೈದ್ಯಕೀಯ ವೃತ್ತಿ ನಡೆಸಿ ನಂತರ 2013 ರ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಭಾರತೀಯ ರೈಲ್ವೆ ಸಿಬ್ಬಂದಿ ಸೇವೆ ( IRPS) ಗೆ ಅರ್ಹತೆ ಪಡೆದರು.
ಪುನಃ 2015 ರ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಇವರು ಭಾರತೀಯ ಆಡಳಿತ ಸೇವೆ (ಐಎಎಸ್) ಕರ್ನಾಟಕ ಕೇಡರ್ಗೆ ಆಯ್ಕೆಯಾದರು. ರಾಯಚೂರಿನಲ್ಲಿ ಜಿಲ್ಲಾ ತರಬೇತಿ, ಸೇಡಂ ಹಾಗೂ ಕಲಬುರ್ಗಿಯಲ್ಲಿ ಉಪವಿಭಾಗಧಿಕಾರಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.