ಧಾರವಾಡ : ಜಿಲ್ಲೆಯ ಗ್ರಾಮೀಣ ಗರಗ ಪೊಲೀಸ್ ಠಾಣೆಯ ಪಿಎಸ್ಐ ಸೇರಿ 5 ಜನ ಕಾನ್ಸ್‌ಟೇಬಲ್‌ಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕೊರೊನಾ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಪೊಲೀಸರು ಸಹ ಶ್ರಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಈವರೆಗೆ 18ಕ್ಕೂ ಹೆಚ್ಚು ಪೊಲೀಸರಿಗೆ ಸೋಂಕು ತಗುಲಿದೆ.
ಇನ್ನು, ಗರಗ ಪೊಲೀಸ್ ಠಾಣೆಗೆ ಸ್ಯಾನಿಟೈಸರ್ ಸಿಂಪಡಿಸಲಾಗಿದ್ದು, ಸೀಲ್‌ಡೌನ್ ಮಾಡಲಾಗಿದೆ.